ಕ್ರಿಕೆಟ್

ಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ ಜಯ

ಭಾರತ-ಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಎದುರಾಳಿ ತಂಡದ ವಿರುದ್ಧ 7 ವಿಕೆಟ್ ಗಳ ಜಯಗಳಿಸಿದೆ.

ಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ ಜಯ
ಇಶಾನ್ ಕಿಶನ್ ಬ್ಯಾಟಿಂಗ್
Published On :

ಕೊಲಂಬೋ: ಭಾರತ-ಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಎದುರಾಳಿ ತಂಡದ ವಿರುದ್ಧ 7 ವಿಕೆಟ್ ಗಳ ಜಯಗಳಿಸಿದೆ. 

ಆರಂಭಿಕರಾದ ಪೃಥ್ವಿ ಶಾ (43) ಮತ್ತು ಶಿಖರ್ ಧವನ್ (ಅಜೇಯ 86) ಇವರುಗಳ ಬಿರುಸಿನ ಆಟದ ಬಲದಿಂದ ಟೀಮ್ ಇಂಡಿಯಾ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಏಳು ವಿಕೆಟ್ ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತು. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 50 ಓವರ್ ಗಳಲ್ಲಿ 9 ವಿಕೆಟ್ ಗೆ 262 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 36.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 263 ರನ್ ಸೇರಿಸಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಶಿಖರ್ ಧನವ್ ಮೊದಲ ಬಾರಿ ನಾಯಕನಾಗಿ ಭಾರತ ಕ್ರಿಕೆಟ್ ತಂಡದ ನೇತೃತ್ವ ವಹಿಸಿದ್ದರು.  

ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಚೊಚ್ಚಲ ಅರ್ಧ ಶತಕದ ಮೂಲಕ ತಮ್ಮ 23 ನೇ ಜನ್ಮದಿನವನ್ನು ಆಚರಿಸಿದರು. ಲಂಕಾದ ಅನನುಭವಿ ಆಟಗಾರರು ವೇಗವಾಗಿ ವಿಕೆಟ್ ಒಪ್ಪಿಸುತ್ತಿದ್ದರಾದರೂ 262 ರನ್ ಗಳನ್ನು ಗಳಿಸಿದರು. ಆದರೆ ಭಾರತದ ಬಲಿಷ್ಠ ಬ್ಯಾಟಿಂಗ್ ಗೆ ಇದು ಸಾಧಾರಣ ಸವಾಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.