3ನೇ ಪಂದ್ಯ: 9 ವರ್ಷಗಳ ಬಳಿಕ ತವರಿನಲ್ಲಿ ಏಕದಿನ ಪಂದ್ಯ ಗೆದ್ದ ಲಂಕಾ, ಭಾರತಕ್ಕೆ ಸರಣಿ
ಸತತ ಸೋಲುಗಳಿಂದ ಕಂಗೆಟ್ಟಿದ್ದ ಶ್ರೀಲಂಕಾ ತಂಡ, ಭಾರತದ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಗೆಲುವು ಕಂಡಿದೆ.

ಕೊಲಂಬೊ: ಸತತ ಸೋಲುಗಳಿಂದ ಕಂಗೆಟ್ಟಿದ್ದ ಶ್ರೀಲಂಕಾ ತಂಡ, ಭಾರತದ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಗೆಲುವು ಕಂಡಿದೆ.
ಕೊಲೊಂಬೋದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್ ಗಳಿಂದ ಆತಿಥೇಯ ಪಡೆ ಎದುರು ಸೋತರೂ ಭಾರತ ತಂಡ ಸರಣಿ ಗೆದ್ದುಕೊಂಡಿದೆ. ಶ್ರೀಲಂಕಾ ತಂಡ ತವರಿನಲ್ಲಿ ಸುದೀರ್ಘ 9 ವರ್ಷಗಳ ಬಳಿಕ ಏಕದಿನ ಪಂದ್ಯವೊಂದನ್ನು ಗೆದ್ದಿದೆ.
ಮಳೆಯ ವಿರಾಮವನ್ನು ಸಂಪೂರ್ಣವಾಗಿ ಬಳಸಿಕೊಂಡ ಲಂಕಾ ತಂಡ 43.1 ಓವರ್ ಗಳಿಗೆ ಭಾರತ ತಂಡವನ್ನು 225 ರನ್ ಗಳಿಗೆ ಬೌಲ್ ಔಟ್ ಮಾಡುವಲ್ಲಿ ಯಶಸ್ವಿಯಾಯಿತು. ಡಕ್ವರ್ತ್ ಲೂಯಿಸ್ ಆಧಾರದಲ್ಲಿ ನಿಗದಿಯಾಗಿದ್ದ 227 ರನ್ ಗಳ ಗುರಿಯನ್ನು ಬೆನ್ನಟ್ಟಿದ ಲಂಕಾ, 48 ಎಸೆತಗಳು ಬಾಕಿ ಇರುವಾಗಲೇ ಅಂದರೆ 39 ಓವರ್ ಗಳಿಗೆ 7 ವಿಕೆಟ್ ಕಳೆದುಕೊಂಡು 227 ರನ್ ಗಳ ಮೂಲಕ ಭಾರತದ ವಿರುದ್ಧ ಜಯಗಳಿಸಿತು.
ಲಂಕಾ ಪರ ಅವಿಷ್ಕಾ ಫರ್ನಾಂಡೋ ( 98 ಎಸೆತಗಳಲ್ಲಿ 76 ರನ್) ಭಾನುಕಾ ರಾಜಪಕ್ಸ (56 ಎಸೆತಗಳಲ್ಲಿ 65 ರನ್) ಗಳಿಸಿ ಲಂಕಾ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


