ಇಂಗ್ಲೆಂಡ್ ಪ್ರವಾಸ: ಲಂಡನ್‌ನಲ್ಲಿರುವ ಟೀಂ ಇಂಡಿಯಾ ತಂಡವನ್ನು ಸೇರಲಿರುವ ಸೂರ್ಯಕುಮಾರ್, ಪೃಥ್ವಿ ಶಾ!
ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು ಗಾಯಗೊಂಡಿರುವ ಆಟಗಾರರಾದ ಶುಬ್ಮನ್ ಗಿಲ್ ಮತ್ತು ವಾಷಿಂಗ್ಟನ್ ಸುಂದರ್‌ಗೆ ಬದಲಿಯಾಗಿ ಪೃಥ್ವಿ ಶಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ಲಂಡನ್: ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು ಗಾಯಗೊಂಡಿರುವ ಆಟಗಾರರಾದ ಶುಬ್ಮನ್ ಗಿಲ್ ಮತ್ತು ವಾಷಿಂಗ್ಟನ್ ಸುಂದರ್‌ಗೆ ಬದಲಿಯಾಗಿ ಪೃಥ್ವಿ ಶಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ಇನ್ನು ಹೆಚ್ಚುವರಿಯಾಗಿ ಬಂಗಾಳ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್ ಅವರನ್ನು ಮುಖ್ಯ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಸ್ಟ್ಯಾಂಡ್ ಬೈ ಆಗಿದ್ದ ವೇಗಿ ಅವೇಶ್ ಖಾನ್ ಕೂಡ ಎಡಗೈ ಹೆಬ್ಬೆರಳಿ ಗಾಯದಿಂದಾಗಿ ಮನೆಗೆ ಮರಳಿದ್ದಾರೆ.
"ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಬದಲಿ ಆಟಗಾರರನ್ನಾಗಿ ಹೆಸರಿಸಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ತನ್ನ ಬಲಗೈ ಬೌಲಿಂಗ್ ಬೆರಳಿಗೆ ಚುಚ್ಚುಮದ್ದನ್ನು ತೆಗೆದುಕೊಂಡಿದ್ದಾರೆ. ಆದರೂ ಅವರ ಚೇತರಿಕೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ಅವರ ಬೌಲಿಂಗ್-ಫಿಟ್ ಆಗಲ್ಲ. ಹೀಗಾಗಿ ಅವರನ್ನು ಟೂರ್ನಿಯಿಂದ ಕೈಬಿಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


