2ನೇ ಟಿ-20 ಪಂದ್ಯದಲ್ಲಿ ಭಾರತವನ್ನು ನಾಲ್ಕು ವಿಕೆಟ್ ಗಳಿಂದ ಮಣಿಸಿದ ಶ್ರೀಲಂಕಾ
ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಉಭಯ ತಂಡಗಳು 1-1 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.

ಕೊಲಂಬೊ: ಇಲ್ಲಿನ ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಉಭಯ ತಂಡಗಳು 1-1 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಟೀಂ ಇಂಡಿಯಾ ಪರ ಋತುರಾಜ್ ಗಾಯಕ್ವಾಡ್, 21, ಶಿಖರ್ ಧವನ್ 40, ದೇವದತ್ ಪಡ್ಡಿಕಲ್ 29, ನಿತೀಶ್ ರಾಣಾ 9 ರನ್ ಗಳಿಸಿದರು.
ಭಾರತ ನೀಡಿದ 132 ರನ್ ಗಳ ಗುರಿ ಬೆನ್ನಟ್ಟಿದ್ದ ಶ್ರೀಲಂಕಾ ತಂಡದ ಪರ ಅವಿಷ್ಕಾ ಫರ್ನಾಂಡೋ 11, ಮಿನೊದ್ ಬಾನುಕಾ 36, ಸದೀರಾ ಸಮರ ವಿಕ್ರಮ 8, ದಾಸೂನ್ ಶಾನಕಾ 3, ಧನಂಜಯ ಡಿ ಸಿಲ್ವಾ 40 , ವಾನಿಂದು ಹಸರಂಗ 15, ರಮೇಶ್ ಮೆಂಡಿಸ್ 2, ಚಾಮಿಕಾ ಕರುಣರತ್ನೆ 12 ರನ್ ಗಳಿಸುವ ಮೂಲಕ ಶ್ರೀಲಂಕಾ ಆರು ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು. ಶ್ರೀಲಂಕಾ ಪರ 40 ರನ್ ಗಳಿಸಿದ ಧನಂಜಯ ಡಿ ಸಿಲ್ವಾ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


