ಯುಎಇಯಲ್ಲಿ ಸೆ.19 ರಿಂದ 14ನೇ ಆವೃತ್ತಿಯ ಐಪಿಎಲ್ ಪುನರಾರಂಭ; ಅಕ್ಟೋಬರ್ 15ಕ್ಕೆ ಫೈನಲ್!
ಕೊರೋನಾ ಕಾರಣದಿಂದ ಅರ್ಧಕ್ಕೆ ನಿಲ್ಲಿಸಲಾಗಿದ್ದ ಐಪಿಎಲ್ 2021 ಆವೃತ್ತಿಯನ್ನು ಪುನರಾರಂಭಿಸಲು ಸಿದ್ದತೆ ನಡೆಯುತ್ತಿದ್ದು ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಆರಂಭವಾಗಲಿದೆ.

ಮುಂಬೈ: ಕೊರೋನಾ ಕಾರಣದಿಂದ ಅರ್ಧಕ್ಕೆ ನಿಲ್ಲಿಸಲಾಗಿದ್ದ ಐಪಿಎಲ್ 2021 ಆವೃತ್ತಿಯನ್ನು ಪುನರಾರಂಭಿಸಲು ಸಿದ್ದತೆ ನಡೆಯುತ್ತಿದ್ದು ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಆರಂಭವಾಗಲಿದೆ.
ಭಾರತದಲ್ಲಿ ಕೊರೋನಾ ಪಿಡುಗು ಕಡಿಮೆಯಾಗದ ಕಾರಣ ಯುಎಇಯಲ್ಲಿ ಐಪಿಎಲ್ ನ ಉಳಿದ ಪಂದ್ಯಗಳನ್ನು ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದರಿಂದ ಈ ಆವೃತ್ತಿಯ ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ 19 ರಿಂದ ದುಬೈ, ಅಬುಧಾಬಿ ಹಾಗೂ ಶಾರ್ಜಾದಲ್ಲಿ ಆಯೋಜಿಸಲಾಗುವುದು ಎಂದು ಬಿಸಿಸಿಐ ಪ್ರಕಟಿಸಿದೆ.
ಈ ವರ್ಷದ ಐಪಿಎಲ್ ಫೈನಲ್ ಅಕ್ಟೋಬರ್ 15ರಂದು ನಡೆಯಲಿದೆ ಎಂಬ ಅಂಶವೂ ಬಹಿರಂಗವಾಗಿದೆ. 25 ದಿನಗಳ ಒಳಗೆ ಟೂರ್ನಿಯನ್ನು ಮುಗಿಸಲು ಕ್ರಿಕೆಟ್ ಮಂಡಳಿ ಉತ್ಸುಕವಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಕೆಲ ವಿದೇಶಿ ಆಟಗಾರರು ಈ ಬಾರಿಯ ಐಪಿಎಲ್ ನಿಂದ ಹೊರಹೋಗಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ನಾವು ವಿದೇಶಿ ಆಟಗಾರರನ್ನು ಸಂಪರ್ಕಿಸಿ ಮಾತುಕತೆ ನಡೆಸುತ್ತಿದ್ದೇವೆ. ಮಾತುಕತೆಗಳು ಫಲ ನೀಡಿದರೆ ವಿದೇಶಿ ಆಟಗಾರರು ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲದಿದ್ದರೆ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ.
ಇನ್ನು 2020ರ ಐಪಿಎಲ್ ಸಹ ರದ್ದಾಗಿದ್ದು ಈ ವೇಳೆ ಟೂರ್ನಿಯನ್ನು ಬಯೋ-ಬಬಲ್ ನಲ್ಲಿ ಯುಎಇಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


