ಕ್ರಿಕೆಟ್

ಸಚಿನ್ 21ನೇ ಶತಮಾನ ಶ್ರೇಷ್ಠ ಬ್ಯಾಟ್ಸ್ ಮನ್

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ 21 ನೇ ಶತಮಾನದ ಶ್ರೇಷ್ಠ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಸಚಿನ್ ಹಾಗೂ ಶ್ರೀಲಂಕಾದ ಶ್ರೇಷ್ಠ ಬ್ಯಾಟ್ಸ್‌ಮನ್ ಕುಮಾರ್ ಸಂಗಕ್ಕಾರ ನಡುವೆ ಸ್ಪರ್ಧೆ ನಡೆದಿತ್ತು. ಇಬ್ಬರೂ ಆಟಗಾರರು ಸಮಾನ ಅಂಕಗಳನ್ನು ಗಳಿಸಿದರು ಆದರೆ ಹೆಚ್ಚಿನ ತೀರ್ಪುಗಾರ ಸದಸ್ಯರು ಸಚಿನ್ ಪರ ವಾಲಿದ್ದರು

ಸಚಿನ್ 21ನೇ ಶತಮಾನ ಶ್ರೇಷ್ಠ ಬ್ಯಾಟ್ಸ್ ಮನ್
ಸಚಿನ್ ತೆಂಡೂಲ್ಕರ್
Published On :

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ 21 ನೇ ಶತಮಾನದ ಶ್ರೇಷ್ಠ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಸಚಿನ್ ಹಾಗೂ ಶ್ರೀಲಂಕಾದ ಶ್ರೇಷ್ಠ ಬ್ಯಾಟ್ಸ್‌ಮನ್ ಕುಮಾರ್ ಸಂಗಕ್ಕಾರ ನಡುವೆ ಸ್ಪರ್ಧೆ ನಡೆದಿತ್ತು. ಇಬ್ಬರೂ ಆಟಗಾರರು ಸಮಾನ ಅಂಕಗಳನ್ನು ಗಳಿಸಿದರು ಆದರೆ ಹೆಚ್ಚಿನ ತೀರ್ಪುಗಾರ ಸದಸ್ಯರು ಸಚಿನ್ ಪರ ವಾಲಿದ್ದರು.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ಗೆ ಮುನ್ನ ಟೆಸ್ಟ್ ಕ್ರಿಕೆಟ್‌ನ ಐತಿಹಾಸಿಕ ಕ್ಷಣಗಳನ್ನು ಆಚರಿಸಲು ಭಾರತದ ಪ್ರಮುಖ ಕ್ರೀಡಾ ಪ್ರಸಾರಕ ಸ್ಟಾರ್ ಸ್ಪೋರ್ಟ್ಸ್ ಟೆಸ್ಟ್ ಕ್ರಿಕೆಟ್‌ನಲ್ಲಿ 21 ನೇ ಶತಮಾನದ ಶ್ರೇಷ್ಠ ಆಟಗಾರನನ್ನು ಆಯ್ಕೆ ಮಾಡುವ ವಿಶಿಷ್ಟ ಪ್ರಯತ್ನ ಕೈಗೊಂಡಿತ್ತು. 

ಅನುಭವಿ ಕ್ರಿಕೆಟಿಗರಿಂದ ಹಿಡಿದು ಹಿರಿಯ ಕ್ರೀಡಾ ಪತ್ರಕರ್ತರು, ಪ್ರಸಾರಕರು, ಸಂಖ್ಯಾಶಾಸ್ತ್ರಜ್ಞರು, ವಿಶ್ಲೇಷಕರು, ಜಗತ್ತಿನಾದ್ಯಂತದ ನಿರೂಪಕರವರೆಗೆ ಇಡೀ ಕ್ರಿಕೆಟಿಂಗ್ ಸಮುದಾಯವನ್ನು ಒಟ್ಟುಗೂಡಿಸುವುದು ಇದರ ಹಿಂದಿನ ಉದ್ದೇಶವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.