ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಭಾರೀ ನಿರೀಕ್ಷೆ ಮೂಡಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಭಾರತ ತಂಡದ ವಿರುದ್ಧ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಸೌಥ್ಯಾಂಪ್ಟನ್: ಭಾರೀ ನಿರೀಕ್ಷೆ ಮೂಡಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಭಾರತ ತಂಡದ ವಿರುದ್ಧ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ರೋಸ್ ಬೌಲ್ ನ ಸೌಥ್ಯಾಂಪ್ಟನ್ ಕ್ರೀಡಾಂಗಣದಲ್ಲಿ ನಿನ್ನೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಆರಂಭವಾಗಿರಲಿಲ್ಲ. ಮೈದಾನದಲ್ಲಿ ತುಂಬಿದ್ದ ನೀರಿನಿಂದಾಗಿ ಇಡೀ ದಿನದ ಪಂದ್ಯ ರದ್ದಾಗಿತ್ತು. ಇದೀಗ ನಿರಂತರವಾಗಿ ಮೈದಾನದ ಸಿಬ್ಬಂದಿಗಳು ಹರಸಾಹಸಪಟ್ಟು ಮೈದಾನದ ಅಂಗಳದಲ್ಲಿದ್ದ ನೀರನ್ನು ತೆಗೆದು ಹಾಕಿ ಆಟಕ್ಕೆ ಮೈದಾನವನ್ನು ಸಜ್ಜುಗೊಳಿಸಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
#TeamIndia is wearing black armbands in remembrance of Milkha Singhji, who passed away due to COVID-19.
ಲೈವ್ ಸ್ಕೋರ್:
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


