ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಚಹಾ ವಿರಾಮಕ್ಕೆ ಮುನ್ನ ಭಾರತ 217 ರನ್ ಗೆ ಆಲೌಟ್
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 217ರನ್ ಗಳ ಸಾಧಾರಣ ಮೊತ್ತಕ್ಕೆ ಆಲೌಟ್ ಆಗಿದೆ.

ಸೌಥ್ಯಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 217 ರನ್ ಗಳ ಸಾಧಾರಣ ಮೊತ್ತಕ್ಕೆ ಆಲೌಟ್ ಆಗಿದೆ.
205 ರನ್ ಗಳಿಸುವಾಗ ಭಾರತ ಏಳು ವಿಕೆಟ್ ಕಳೆದುಕೊಂಡಿತ್ತು ಆ ನಂತರ ಬಲಗೈ ವೇಗಿ ಕೈಲ್ ಜೆಮಿಸನ್ ಅವರ ಆಕ್ರಮಣಕಾರಿ ಬೌಲಿಂಗ್ ಭಾರತದ ಸರ್ವಪತನಕ್ಕೆ ಕಾರಣವಾಯಿತು.
ಭಾರತದ ಪರ ನಾಯಕ ವಿರಾಟ್ ಕೊಹ್ಲಿ(44) ಹಾಗೂ ಉಪನಾಯಕ ರಹಾನೆ (49) ಉತ್ತಮ ಮೊತ್ತ ಗಳಿಸಿದ್ದರು
ರೋಸ್ ಬೌಲ್ ನ ಸೌಥ್ಯಾಂಪ್ಟನ್ ಕ್ರೀಡಾಂಗಣದಲ್ಲಿ ನಿನ್ನೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಆರಂಭವಾಗಿರಲಿಲ್ಲ. ಇಂದು ಆರಂಭವಾದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


