WTC ಫೈನಲ್: ನ್ಯೂಜಿಲೆಂಡ್ ಆಟಗಾರರಿಗೆ ನಿಂದನೆ ಆರೋಪ; ಇಬ್ಬರು ಪ್ರೇಕ್ಷಕರನ್ನು ಹೊರಗೆ ಕಳಿಸಿದ ಸಿಬ್ಬಂದಿ
ಐತಿಹಾಸಿಕ ವಿಶ್ವ ಟೆಸ್ಟ್ ಚಾಂಪಿಯನ್ ಷಿಫ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರರನ್ನು ನಿಂದಿಸಿದ ಆರೋಪದ ಮೇರೆಗೆ ಇಬ್ಬರು ಪ್ರೇಕ್ಷಕರನ್ನು ಮೈದಾನದಿಂದ ಹೊರಗೆ ಹಾಕಿರುವ ಘಟನೆ ನಡೆದಿದೆ.

ಸೌಥ್ಯಾಂಪ್ಟನ್: ಐತಿಹಾಸಿಕ ವಿಶ್ವ ಟೆಸ್ಟ್ ಚಾಂಪಿಯನ್ ಷಿಫ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರರನ್ನು ನಿಂದಿಸಿದ ಆರೋಪದ ಮೇರೆಗೆ ಇಬ್ಬರು ಪ್ರೇಕ್ಷಕರನ್ನು ಮೈದಾನದಿಂದ ಹೊರಗೆ ಹಾಕಿರುವ ಘಟನೆ ನಡೆದಿದೆ.
ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಷಿಫ್ ಫೈನಲ್ ಪಂದ್ಯದ ಐದನೇ ದಿನದಾಟದಲ್ಲಿ ಕ್ರೀಡಾಂಗಣದಲ್ಲಿ ಹೆಚ್ಚು ಪ್ರೇಕ್ಷಕರು ಸೇರಿದ್ದರು. ಮೈದಾನದಲ್ಲಿ ಕೊಂಚ ಭಾರತೀಯ ಪ್ರೇಕ್ಷಕರೇ ಹೆಚ್ಚಿದ್ದರು. ಈ ವೇಳೆ ಇಬ್ಬರು ಭಾರತ ತಂಡದ ಅಭಿಮಾನಿಗಳು ವಿರಾಟ್ ಕೊಹ್ಲಿ ಅವರನ್ನು ಹೊಗಳುವ ಭರದಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರರನ್ನು ನಿಂದಿಸಿದ್ದಾರೆ. ಈ ಕುರಿತಂತೆ ಆಟಗಾರರು ಅಂಪೈರ್ ಗಳಿಗೆ ಮಾಹಿತಿ ನೀಡಿದ್ದು, ಅಂಪೈರ್ ಗಳ ಸೂಚನೆಯಂತೆ ಕೆಟ್ಟದಾಗಿ ನಡೆದುಕೊಂಡ ಇಬ್ಬರು ಪ್ರೇಕ್ಷಕರನ್ನು ಅಲ್ಲಿದ್ದ ಭದ್ರತಾ ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ.
ಬಳಿಕ ಅಂಪೈರ್ ಗಳು ಐಸಿಸಿಗೆ ವರದಿ ನೀಡಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಐಸಿಸಿ, ಕ್ರಿಕೆಟ್‌ನಲ್ಲಿ ಈ ರೀತಿಯ ನಡವಳಿಕೆಯನ್ನು ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾತನಾಡಿರುವ ಕ್ರಿಕೆಟಿಗ ಟಿಮ್ ಸೌಥಿ, ಇಂತಹ ಘಟನೆ ಸಂಭವಿಸಿರುವ ಬಗ್ಗೆ ನಾನು ಮೊದಲು ಕೇಳುತ್ತಿದ್ದೇನೆ. ಮೈದಾನದಲ್ಲಿ ಯಾವಾಗಲೂ ಆಟವನ್ನು ಸ್ಪೂರ್ತಿಯಿಂದ ಆಡಬೇಕು ಎಂದು ಹೇಳಿದ್ದಾರೆ.
ಭಾರತದ ವಿರುದ್ಧ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 249 ರನ್‌ಗಳನ್ನು ಕಲೆಹಾಕಿದ್ದು, ಅಲ್ಪ ಮುನ್ನಡೆ ಸಾಧಿಸಿದೆ. 5ನೇ ದಿನದಾಟದಂದು ಬ್ಯಾಟಿಂಗ್ ಮುಂದುವರಿಸಿದ ಕಿವೀಸ್ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 32 ರನ್‌ಗಳ ಮುನ್ನಡೆ ಸಾಧಿಸಲಷ್ಟೇ ಶಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


