ಐಪಿಎಲ್ 2021: ಚೆನ್ನೈ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 4 ವಿಕೆಟ್ ಗಳ ರೋಚಕ ಜಯ
ಗೆಲುವಿನ ಅಲೆಯಲ್ಲಿ ತೇಲುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಗೆ ಮುಂಬೈ ಇಂಡಿಯನ್ಸ್ ತಂಡ ಸೋಲಿನ ಶಾಕ್ ನೀಡಿದ್ದು, 4 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.

ನವದೆಹಲಿ: ಗೆಲುವಿನ ಅಲೆಯಲ್ಲಿ ತೇಲುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಗೆ ಮುಂಬೈ ಇಂಡಿಯನ್ಸ್ ತಂಡ ಸೋಲಿನ ಶಾಕ್ ನೀಡಿದ್ದು, 4 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಮುಂಬೈ ಇಂಡಿಯನ್ಸ್ ತಂಡ 4 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 219 ರನ್ಗಳ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ ಕೀರನ್ ಪೊಲಾರ್ಡ್ ಅವರ (ಅಜೇಯ 87 ರನ್) ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿ 4 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಮುಂಬೈ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಕೀರನ್ ಪೊಲಾರ್ಡ್ ಕೇವಲ 34 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ 6 ಬೌಂಡರಿ ಸಹಿತ 87 ರನ್ ಕಲೆಹಾಕಿದರು. ಉಳಿದಂತೆ ಕ್ವಿಂಟನ್ ಡಿ ಕಾಕ್ 38, ರೋಹಿತ್ ಶರ್ಮಾ 35 ಹಾಗೂ ಕೃಣಾಲ್ ಪಾಂಡ್ಯ 32 ರನ್ ದಾಖಲಿಸಿ ಗೆಲುವಿನಲ್ಲಿ ಸಾಥ್ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


