ಕೋವಿಡ್-19: ಸೋದರನ ಬಳಿಕ ತಂದೆಯನ್ನೂ ಕಳೆದುಕೊಂಡ ರಾಜಸ್ಥಾನ್ ರಾಯಲ್ಸ್ ವೇಗಿ ಚೇತನ್ ಸಕಾರಿಯಾ
ರಾಜಸ್ಥಾನ್ ರಾಯಲ್ಸ್ (ಆರ್.ಆರ್.) ವೇಗಿ ಚೇತನ್ ಸಕಾರಿಯಾ ಅವರ ತಂದೆ ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ಫ್ರ್ಯಾಂಚೈಸ್ ಭಾನುವಾರ ತಿಳಿಸಿದೆ.

ನವದೆಹಲಿ: ರಾಜಸ್ಥಾನ್ ರಾಯಲ್ಸ್ (ಆರ್.ಆರ್.) ವೇಗಿ ಚೇತನ್ ಸಕಾರಿಯಾ ಅವರ ತಂದೆ ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ಫ್ರ್ಯಾಂಚೈಸ್ ಭಾನುವಾರ ತಿಳಿಸಿದೆ.
"ಕಾಂಜಿಭಾಯ್ ಸಕಾರಿಯಾ ಅವರು ಇಂದು ಕೋವಿಡ್-19 ರೊಂದಿಗಿನ ಹೋರಾಟದಲ್ಲಿ ಸೋತು ಸಾವನ್ನಪ್ಪಿದ್ದಾರೆ ಎಂದು ಹೇಳಲು ನಮಗೆ ತುಂಬಾ ದುಃಖವಾಗುತ್ತಿದೆ. ನಾವು ಚೇತನ್ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಈ ಕಷ್ಟದ ಸಮಯದಲ್ಲಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇವೆ" ಎಂದು ಆರ್.ಆರ್. ಟ್ವೀಟ್ ಮಾಡಿದೆ.
2021 ರಲ್ಲಿ ತನ್ನ ಮೊದಲ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡಿದ್ದ ಎಡಗೈ ವೇಗದ ಬೌಲರ್ ಚೇತನ್ ಸಕಾರಿಯಾ ಈ ವರ್ಷದ ಜನವರಿಯಲ್ಲಿ ತನ್ನ ಸಹೋದರನನ್ನು ಕಳೆದುಕೊಂಡಿದ್ದರು.
ಸಕಾರಿಯಾ ತನ್ನ ಸಹೋದರ ಸಾಯುವ ಸಮಯದಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುತ್ತಿದ್ದರು. ಅಲ್ಲದೆ ಪಂದ್ಯಾವಳಿ ಮುಗಿಯುವವರೆಗೆ ಅವರಿಗೆ ಈ ದುಃಖದ ಸಂಗತಿಯ ಅರಿವಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


