ಭಾರತ-ಲಂಕಾ ನಡುವೆ 3 ಏಕದಿನ ಮತ್ತು 5 ಟಿ20 ಪಂದ್ಯಗಳ ಸರಣಿ ನಡೆಯಲಿದೆ: ಬಿಸಿಸಿಐ ಅಧ್ಯಕ್ಷ ಗಂಗೂಲಿ
ರದ್ದುಗೊಂಡಿರುವ ಐಪಿಎಲ್ ಟೂರ್ನಿ ಭಾರತದಲ್ಲಿ ನಡೆಯುವುದಿಲ್ಲ ಎಂದು ಹೇಳಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇದೀಗ ಭಾರತ ಮತ್ತು ಲಂಕಾ ನಡುವಿನ ಕ್ರಿಕೆಟ್ ಸರಣಿ ಜುಲೈನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ನವದೆಹಲಿ: ರದ್ದುಗೊಂಡಿರುವ ಐಪಿಎಲ್ ಟೂರ್ನಿ ಭಾರತದಲ್ಲಿ ನಡೆಯುವುದಿಲ್ಲ ಎಂದು ಹೇಳಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇದೀಗ ಭಾರತ ಮತ್ತು ಲಂಕಾ ನಡುವಿನ ಕ್ರಿಕೆಟ್ ಸರಣಿ ಜುಲೈನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.
ಜುಲೈನಲ್ಲಿ ಟೀಂ ಇಂಡಿಯಾ ಲಂಕಾದಲ್ಲಿ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿಯನ್ನು ಆಡಲಿದೆ. ಲಂಕಾ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿ ಹಾಗೂ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ ಎಂದರು.
ಏಕಕಾಲಕ್ಕೆ ಭಾರತದ ಎರಡು ತಂಡಗಳು ವಿದೇಶದಲ್ಲಿ ಸರಣಿ ಆಡಲಿದೆ. ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ಲಂಕಾ ವಿರುದ್ಧದ ತಂಡದಲ್ಲಿರುವುದಿಲ್ಲ. ಇದಕ್ಕೆ ಕಾರಣ ಅದೇ ಸಮಯದಲ್ಲಿ ಇಂಗ್ಲೆಂಡ್ ನಲ್ಲಿ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಟೂರ್ನಿ ನಡೆಯಲಿದೆ. ಫೈನಲ್ ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸೆಣೆಸಲಿದ್ದು ಸೆಪ್ಟೆಂಬರ್ 14ರಂದು ಟೆಸ್ಟ್ ಸರಣಿ ಮುಕ್ತಾಯಗೊಳ್ಳಲಿದೆ.
ಲಂಕಾ ವಿರುದ್ಧದ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿಗೆ ಪರಿಣತ ಟೀಂ ಇಂಡಿಯಾ ತಂಡವನ್ನು ನಾವು ರಚಿಸುತ್ತೇವೆ. ಅದು ಪ್ರತ್ಯೇಕವಾದ ತಂಡವಾಗಿರುತ್ತದೆ ಎಂದು ಗಂಗೂಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


