'ಮತ್ತೊಬ್ಬ ಆಟಗಾರನ ಸ್ಥಾನ ಕಸಿದುಕೊಳ್ಳಲು ನನಗೆ ಮನಸ್ಸಿಲ್ಲ'; ಅಭಿಮಾನಿಗಳಿಗೆ ಶಾಕ್ ಕೊಟ್ಟ 'ಎಬಿಡಿ'
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳು ಇಂಗಿತ ವ್ಯಕ್ತಪಡಿಸಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

ಕೇಪ್ ಟೌನ್: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳು ಇಂಗಿತ ವ್ಯಕ್ತಪಡಿಸಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.
ಹೌದು.. ಈ ಬಗ್ಗೆ ಸ್ವತಃ ದಕ್ಷಿಣ ಆಫ್ರಿಕಾದ ಪ್ರಧಾನ ಕೋಚ್ ಮಾರ್ಕ್ ಬೌಚರ್ ಮಾಹಿತಿ ನೀಡಿದ್ದು, 'ಡಿವಿಲಿಯರ್ಸ್ ಇನ್ನೂ ವಿಶ್ವದ ಅತ್ಯುತ್ತಮ ಟಿ 20 ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಅಂತಾರಾಷ್ಟ್ರೀಯ ನಿವೃತ್ತಿಯಿಂದ ಹಿಂದಿರುಗುವ ಮೂಲಕ ಟಿ 20 ವಿಶ್ವಕಪ್‌ಗೆ ಮರಳದಿರಲು ಅವರ ಬಳಿ ಸಾಕಷ್ಟು ಕಾರಣಗಳಿವೆ. ಕೆಲವು ದಿನಗಳಿಂದ ತಂಡದ ಭಾಗವಾಗಿರುವ ಯಾವುದೇ ಆಟಗಾರನ ಸ್ಥಾನವನ್ನು ಕಿತ್ತುಕೊಳ್ಳಲು ಎಬಿಡಿ ಅವರಿಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.
ದಿ ಸಿಟಿಜನ್ ವೆಬ್‌ಸೈಟ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಂಡದಲ್ಲಿ ಮತ್ತೊಬ್ಬ ಆಟಗಾರನ ಸ್ಥಾನಕ್ಕೆ ಕುತ್ತು ತರಲು ಅಥವಾ ಮತ್ತೊಬ್ಬ ಆಟಗಾರನ ಸ್ಥಾನ ಕಸಿದುಕೊಳ್ಳಲು ಎಬಿಡಿಗೆ ಮನಸ್ಸಿಲ್ಲ. ಹೀಗಾಗಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಘೋಷಣೆ ಮಾಡಿರುವ ನಿವೃತ್ತಿಗೆ ಬದ್ಧರಾಗಿದ್ದಾರೆ. ಅವರು ಪ್ರಸ್ತುತ ನಿರ್ಧಾರ ಬದಲಿಸಲು ಸಿದ್ಧರಿಲ್ಲ ಎಂದು ಹೇಳಿದ್ದಾರೆ.
ಅಂತೆಯೇ ತಂಡದ ಸಂಯೋಜನೆಯನ್ನು ಹಾಳುಮಾಡಲು ಡಿವಿಲಿಯರ್ಸ್ ಬಯಸುವುದಿಲ್ಲ ಆದ್ದರಿಂದ ಅವರು ಈ ನಿರ್ಧಾರಕ್ಕೆ ಅವರು ಬಂದಿದ್ದಾರೆ. ತರಬೇತುದಾರನಾಗಿ, ನನ್ನ ಅತ್ಯುತ್ತಮ ಆಟಗಾರರನ್ನು ತಂಡಕ್ಕೆ ತರಲು ನಾನು ಪ್ರಯತ್ನಿಸಬೇಕು. ಎಬಿಡಿಗೆ ಎಂತಹದೆ ತಂಡವನ್ನು ಬಲಿಷ್ಠಗೊಳಿಸುವ ಸಾಮರ್ಥ್ಯವಿದೆ. ಆದರೆ ಅವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಬೌಚರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


