ಕ್ರಿಕೆಟ್

ಬಾಂಗ್ಲಾ ಪ್ರವಾಸದಲ್ಲಿರುವ ಶ್ರೀಲಂಕಾ ತಂಡದ ಮೂವರಿಗೆ ಕೊರೋನಾ!

ಶ್ರೀಲಂಕಾ ಕ್ರಿಕೆಟ್ ತಂಡದ ಮೂವರು ಸದಸ್ಯರು ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದ ಕೆಲವೇ ಗಂಟೆಗಳ ಮೊದಲು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಬಾಂಗ್ಲಾ ಪ್ರವಾಸದಲ್ಲಿರುವ ಶ್ರೀಲಂಕಾ ತಂಡದ ಮೂವರಿಗೆ ಕೊರೋನಾ!
Published On :

ಢಾಕಾ: ಶ್ರೀಲಂಕಾ ಕ್ರಿಕೆಟ್ ತಂಡದ ಮೂವರು ಸದಸ್ಯರು ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದ ಕೆಲವೇ ಗಂಟೆಗಳ ಮೊದಲು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಶ್ರೀಲಂಕಾ ಆತಿಥೇಯ ಬಾಂಗ್ಲಾದೇಶ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡುತ್ತಿದ್ದು ಎರಡನೇ ಮತ್ತು ಮೂರನೇ ಪಂದ್ಯವನ್ನು ಮೇ 25 ಮತ್ತು 28 ಕ್ಕೆ ನಿಗದಿಪಡಿಸಲಾಗಿದೆ.

ಢಾಕಾದಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕಿಂತ ಮುಂಚಿತವಾಗಿ ಇಬ್ಬರು ಆಟಗಾರರು ಮತ್ತು ಶ್ರೀಲಂಕಾದ ತರಬೇತುದಾರ ಕೋವಿಡ್ -19 ಪಾಸಿಟಿವ್ ವರದಿ ಪಡೆದಿದ್ದಾರೆ ಎಂದು ESPNcricinfo ವರದಿ ಮಾಡಿದೆ.

ಆದರೆ ಈ ಕಾರಣದಿಂದಾಗಿ ಪಂದ್ಯವನ್ನು ರದ್ದುಗೊಳಿಸುವ ಸಾಧ್ಯತೆಯನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತಳ್ಳಿಹಾಕಿದೆ ಎಂದು ವೆಬ್‌ಸೈಟ್ ತಿಳಿಸಿದೆ.

ವರದಿಗಳ ಪ್ರಕಾರ ತಂಡದ ಬೌಲಿಂಗ್ ತರಬೇತುದಾರರಾಗಿರುವ ಚಮಿಂದ ವಾಸ್, ಆಟಗಾರರಾದ ಇಸುರು ಉದಾನ ಹಾಗೂ ಶಿರನ್ ಫರ್ನಾಂಡೊ ಅವರಿಗೆ ಸೋಂಕು ದೃಢವಾಗಿದೆ.

ಮೂರು ಪಂದ್ಯಗಳ ಏಕದಿನ ಸರಣಿಯು ವಿಶ್ವಕಪ್ ಸೂಪರ್ ಲೀಗ್‌ನ ಭಾಗವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.