ಟೀಂ ಇಂಡಿಯಾಗೆ ಶುಭ ಸುದ್ದಿ… ಇಂಗ್ಲೆಂಡ್ ವಿಮಾನ ಹತ್ತಲಿದ್ದಾರೆ ಕೆ.ಎಲ್. ರಾಹುಲ್
ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಹಾಗೂ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಆಡಲು ಇಂಗ್ಲೆಂಡ್ ವಿಮಾನ ಹತ್ತಲಿರುವ ಭಾರತ ತಂಡದೊಂದಿಗೆ ಸ್ಟಾರ್ ಆಟಗಾರ ಕೆ.ಎಲ್. ರಾಹುಲ್ ಕೂಡ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಹಾಗೂ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಆಡಲು ಇಂಗ್ಲೆಂಡ್ ವಿಮಾನ ಹತ್ತಲಿರುವ ಭಾರತ ತಂಡದೊಂದಿಗೆ ಸ್ಟಾರ್ ಆಟಗಾರ ಕೆ.ಎಲ್. ರಾಹುಲ್ ಕೂಡ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಇಂಗ್ಲೆಂಡ್ ಪ್ರವಾಸಕ್ಕಾಗಿ ಆಯ್ಕೆಗೊಂಡ ಭಾರತ ತಂಡದಲ್ಲಿ ರಾಹುಲ್ ಸದಸ್ಯರಾಗಿದ್ದರೂ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕಾರಣ ಕೆ.ಎಲ್. ರಾಹುಲ್ ಫಿಟ್‌ನೆಸ್ ಸಾಬೀತುಪಡಿಸಬೇಕಾಗಿತ್ತು. ಈ ಕ್ರಮದಲ್ಲಿ ಅವರು ಸಂಪೂರ್ಣ ಚೇತರಿಸಿಕೊಂಡಿರುವುದರಿಂದ ತಂಡದ ಜತೆಗೆ ಇಂಗ್ಲೆಂಡ್ ಗೆ ತೆರಳಲು ಬಿಸಿಸಿಐ ಹಸಿರು ನಿಶಾನಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪೂರ್ಣ ಫಿಟ್‌ನೆಸ್ ಸಾಧಿಸಿದರೆ ರಾಹುಲ್ ತಂಡಕ್ಕೆ ಮರಳಬಹುದು ಎಂದು ತಂಡದ ಆಯ್ಕೆ ಸಮಯದಲ್ಲಿ ಆಯ್ಕೆದಾರರು ಮೊದಲೇ ಹೇಳಿದ್ದರು. ಈ ವರ್ಷ ಐಪಿಎಲ್ ಮಧ್ಯದಲ್ಲಿಯೇ ರಾಹುಲ್ ಅಪೆಂಡಿಸೈಟಿಸ್ ನಿಂದ ಬಳಲುತ್ತಿದ್ದರು. ರಾಹುಲ್ ಕೊನೆಯ ಬಾರಿ 2019ರ ಸೆಪ್ಟೆಂಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು. ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯ ತಂಡದಲ್ಲಿದ್ದರೂ, ಫೈನಲ್‌ನಲ್ಲಿ ಆಡಲು ಅವರಿಗೆ ಅವಕಾಶ ಸಿಗಲಿಲ್ಲ. 29 ರ ಹರೆಯದ ರಾಹುಲ್ ಇದುವರೆಗೆ 36 ಟೆಸ್ಟ್ ಪಂದ್ಯಗಳಲ್ಲಿ 2006 ರನ್ ಗಳಿಸಿದ್ದಾರೆ. ಇದರಲ್ಲಿ 5 ಶತಕಗಳು ಹಾಗೂ 11 ಅರ್ಧಶತಕಗಳು ಒಳಗೊಂಡಿದೆ.
ಭಾರತ ತಂಡ ಜೂನ್ 2ಕ್ಕೆ ಇಂಗ್ಲೆಂಡ್‌ಗೆ ಹೋಲಿದ್ದು, ಅಲ್ಲಿ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


