ಹೊಟ್ಟೆಪಾಡಿಗೆ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಕ್ಸೇವಿಯರ್ ಡೊಹೆರ್ಟಿ ಬಡಗಿ ಕೆಲಸ!
ಭಾರತದಲ್ಲಿ ಕ್ರಿಕೆಟ್ ಕ್ರೀಡೆಗಿರುವ ಆದರಣೆ, ಪ್ರತಿಷ್ಟೆ ಕುರಿತು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಐಪಿಎಲ್ ನಿಂದಾಗಿ ಅದೆಷ್ಟೋ ಮಂದಿ ದೇಶೀಯ ಹಾಗೂ ವಿದೇಶಿ ಕ್ರಿಕೆಟಿಗರು ಬೆಳಕಿಗೆ ಬರುತ್ತಿದ್ದಾರೆ.

ಕ್ಯಾನ್‌ಬೆರಾ: ಭಾರತದಲ್ಲಿ ಕ್ರಿಕೆಟ್ ಕ್ರೀಡೆಗಿರುವ ಆದರಣೆ, ಪ್ರತಿಷ್ಟೆ ಕುರಿತು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಐಪಿಎಲ್ ನಿಂದಾಗಿ ಅದೆಷ್ಟೋ ಮಂದಿ ದೇಶೀಯ ಹಾಗೂ ವಿದೇಶಿ ಕ್ರಿಕೆಟಿಗರು ಬೆಳಕಿಗೆ ಬರುತ್ತಿದ್ದಾರೆ. ಹರಾಜಿನಲ್ಲಿ ಅವರಿಗೆ ಒಳ್ಳೆಯ ಬೇಡಿಕೆಯಿದೆ. ಪ್ರತಿಭೆ ಸಾಬೀತುಪಡಿಸಿದರೆ ಕೋಟಿ, ಕೋಟಿ ಗಳಿಸುವ ಅವಕಾಶವಿದೆ. ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ
ಹೇಳಿದ ಕೆಲವರು ಇನ್ನೂ ಲೀಗ್‌ನಲ್ಲಿ ಆಡುತ್ತಿದ್ದಾರೆ.
ಆದರೆ, ಕೆಲ ಮಂದಿ ಕ್ರಿಕೆಟ್ಟಿಗರ ಪರಿಸ್ಥಿತಿ ಇದಕ್ಕೆ ಭಿನ್ನವಾಗಿದೆ. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟರ್ ತನ್ನ ಹೊಟ್ಟೆಪಾಡಿಗಾಗಿ ಬಡಗಿಯಾಗಿ ಬದಲಾಗಿದ್ದಾರೆ. ಕ್ಸೇವಿಯರ್ ಡೊಹೆರ್ಟಿ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿ ನಾಲ್ಕು ವರ್ಷಗಳು ಕಳೆದಿವೆ. 2015 ರ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದಲ್ಲಿ ಅವರು ಪಾಲುದಾರರಾಗಿದ್ದರು.ಎಡಗೈ ಸ್ಪಿನ್ನರ್ ಕ್ಸೇವಿಯರ್ ಡೊಹೆರ್ಟಿ 2001-02ರ ಹಂಗಾಮಿನಲ್ಲಿ ಮೊದಲ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅವರು ಸುಮಾರು 17 ವರ್ಷಗಳ ಕಾಲ ಕ್ರಿಕೆಟ್ ವೃತ್ತಿಯನ್ನು ಮುಂದುವರೆಸಿದ್ದರು.
71 ಪ್ರಥಮ ದರ್ಜೆ, 176 ಲಿಸ್ಟ್ ಎ, 74 ಟಿ 20 ಪಂದ್ಯಗಳನ್ನು ಆಡಿದ್ದ ಅವರು ಒಟ್ಟು 415 ವಿಕೆಟ್ ಪಡೆದಿದ್ದರು. ಕೊನೆಯ ಬಾರಿಗೆ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದಲ್ಲಿ 2015 ರಲ್ಲಿ ಕಾಣಿಸಿಕೊಂಡಿದ್ದರು. ಆಸ್ಟ್ರೇಲಿಯಾದ ಮಾಜಿ ಎಡಗೈ ಸ್ಪಿನ್ನರ್ ಈವರೆಗೆ ಆಸ್ಟ್ರೇಲಿಯಾ ಪರ 4 ಟೆಸ್ಟ್ ಹಾಗೂ 60 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಮಾರ್ಚ್ 2020 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ ಆಸ್ಟ್ರೇಲಿಯನ್ ಲೆಜೆಂಡ್ಸ್ ಪರ ಕೊನೆಯ ಬಾರಿ ಆಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


