ಕ್ರಿಕೆಟ್

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿರುವುದು ದೊಡ್ಡ ಗೌರವ: ರಾಹುಲ್ ದ್ರಾವಿಡ್‌

ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುವುದು ಬಹುದೊಡ್ಡ ಗೌರವ. ಇದಕ್ಕೆ ಪ್ರತಿಯಾಗಿ ಉತ್ತಮ ಕೆಲಸ ಮಾಡುವತ್ತ ಚಿತ್ತ ನೆಟ್ಟಿದ್ದೇನೆ ಎಂದು ದಿ ವಾಲ್ ಖ್ಯಾತಿಯ ಭಾರತದ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿರುವುದು ದೊಡ್ಡ ಗೌರವ: ರಾಹುಲ್ ದ್ರಾವಿಡ್‌
ರಾಹುಲ್ ದ್ರಾವಿಡ್
Published On :

ನವದೆಹಲಿ: ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುವುದು ಬಹುದೊಡ್ಡ ಗೌರವ. ಇದಕ್ಕೆ ಪ್ರತಿಯಾಗಿ ಉತ್ತಮ ಕೆಲಸ ಮಾಡುವತ್ತ ಚಿತ್ತ ನೆಟ್ಟಿದ್ದೇನೆ ಎಂದು ದಿ ವಾಲ್ ಖ್ಯಾತಿಯ ಭಾರತದ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಕೋಚ್ ಆಯ್ಕೆಯಾದ ಬೆನ್ನಲ್ಲೇ ಈ ಕುರಿತು ಹೇಳಿಕೆ ನೀಡಿರುವ ದ್ರಾವಿಡ್ ಅವರು, ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುವುದು ಬಹುದೊಡ್ಡ ಗೌರವ. ಇದಕ್ಕೆ ಪ್ರತಿಯಾಗಿ ಉತ್ತಮ ಕೆಲಸ ಮಾಡುವತ್ತ ಚಿತ್ತ ನೆಟ್ಟಿದ್ದೇನೆ. ಹಾಲಿ ಕೋಚ್ ರವಿಶಾಸ್ತ್ರಿ ಮಾರ್ಗದರ್ಶನದಲ್ಲಿ ತಂಡವು ಹಲವು ಮಹತ್ವದ ಸಾಧನೆಗಳನ್ನು ಮಾಡಿದೆ. ಇದೇ ಉತ್ತಮ ಕಾರ್ಯವನ್ನು ಮುಂದುವರಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಅವರನ್ನು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿ ಬಿಸಿಸಿಐ ಪ್ರಕಟಣೆ ಹೊರಡಿಸಿದೆ. 

ಮೂಲಗಳ ಪ್ರಕಾರ 'ಸುಲಕ್ಷಣಾ ನಾಯ್ಕ ಮತ್ತು ಆರ್‌.ಪಿ. ಸಿಂಗ್ ಅವರಿದ್ದ ಕ್ರಿಕೆಟ್ ಸಲಹಾ ಸಮಿತಿಯು ರಾಹುಲ್ ದ್ರಾವಿಡ್ ಅವರನ್ನು ಅವಿರೋಧವಾಗಿ ಮುಖ್ಯ ಕೋಚ್ ಆಗಿ ನೇಮಕ ಮಾಡಿದ್ದು, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಸಂದರ್ಭದಲ್ಲಿ ದ್ರಾವಿಡ್ ಕೋಚ್ ಆಗಿ ಕಾರ್ಯಾರಂಭ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ನಡೆಯುತ್ತಿರುವ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ನಂತರ ಮುಖ್ಯ ಕೋಚ್ ರವಿಶಾಸ್ತ್ರಿಯವರ ಕಾರ್ಯಾವಧಿಯು ಮುಕ್ತಾಯಗೊಳ್ಳಲಿದ್ದು, ಈ ಸ್ಥಾನಕ್ಕಾಗಿ ಅಭ್ಯರ್ಥಿಯ ಆಯ್ಕೆಗಾಗಿ  ಅಕ್ಟೋಬರ್‌ 26ರಂದು ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು. ಆರಂಭದಲ್ಲಿ ಕೋಚ್ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಒಲ್ಲೆ ಎಂದಿದ್ದರು. 

ಆದರೆ ದುಬೈನಲ್ಲಿ ಕಳೆದ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ನಡೆಯುವ ಸಂದರ್ಭದಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರು ದ್ರಾವಿಡ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದರು. ಕೋಚ್ ಹುದ್ದೆ ಸ್ವೀಕರಿಸಲು ದ್ರಾವಿಡ್ ಅವರನ್ನು ಮನವೊಲಿಸಿದ್ದರು. ಅವರ ಮನವೊಲಿಕೆ ಫಲವಾಗಿ ಬಿಸಿಸಿಐ ಮಂಡಳಿಯ ನಿಯಮಾವಳಿಯಂತೆ ಆಯ್ಕೆಯನ್ನು ಸಂದರ್ಶನ ಮೂಲಕ ನಡೆಸಲು ರಾಹುಲ್ ದ್ರಾವಿಡ್ ಅವರು ಅರ್ಜಿ ಹಾಕಿದ್ದರು.

ರಾಹುಲ್ ದ್ರಾವಿಡ್ ಅವರು, ಭಾರತದ ಪರ 164 ಟೆಸ್ಟ್, 344 ಅಂತರರಾಷ್ಟ್ರೀಯ ಏಕದಿನ ಮತ್ತು 298 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಭಾರತ ಕ್ರಿಕೆ್ಟ್ ತಂಡದ ನಾಯಕರೂ ಆಗಿದ್ದ ದ್ರಾವಿಡ್ ನಿವೃತ್ತಿಯ ನಂತರ ಭಾರತ ಎ, 19 ವರ್ಷದೊಳಗಿನವರ ತಂಡಗಳಿಗೆ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. 

Related Article

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ಹಾಲಿ ಟೂರ್ನಿಯಲ್ಲಿ ಗರಿಷ್ಛ ರನ್ ದಾಖಲೆ ಬರೆದ ಭಾರತ

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ದಾಖಲೆ ಬರೆದ ಭಾರತ

ಟಿ20 ವಿಶ್ವಕಪ್: ಭರ್ಜರಿ ಬ್ಯಾಟಿಂಗ್ ಮೂಲಕ ದಾಖಲೆ ಬರೆದ ರೋ'ಹಿಟ್'-ರಾಹುಲ್ ಜೋಡಿ

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 66 ರನ್ ಗಳ ಭರ್ಜರಿ ಜಯ

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ 'ಕನ್ನಡಿಗ' ರಾಹುಲ್ ದ್ರಾವಿಡ್ ನೇಮಕ

T20 World Cup: ಅಫ್ಘಾನ್ ವಿರುದ್ಧ ಸಿಡಿದೆದ್ದ ಟೀಂ ಇಂಡಿಯಾ!

T20 World Cup: ಸೆಮಿಫೈನಲ್ ಗೆ ಹೋಗಲು ಕೊಹ್ಲಿ ಮುಂದೆ 2 ಸವಾಲು; ಪವಾಡ ನಡೆಯಬೇಕು!

T20I Ranking: ಬಾಬರ್ ಅಜಂ ವಿಶ್ವದ ನಂ.1 ಟಿ20 ಬ್ಯಾಟ್ಸ್‌ಮನ್, ವನಿಂದು ಹಸ್ರಂಗ ಅಗ್ರ ಬೌಲರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.