ಕ್ರಿಕೆಟ್

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ಹಾಲಿ ಟೂರ್ನಿಯಲ್ಲಿ ಗರಿಷ್ಛ ರನ್ ದಾಖಲೆ ಬರೆದ ಭಾರತ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಆಫ್ಧಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ಹಾಲಿ ಟೂರ್ನಿಯಲ್ಲಿ ಗರಿಷ್ಠ ರನ್ ಗಳ ದಾಖಲೆ ನಿರ್ಮಾಣ ಮಾಡಿದೆ.

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ಹಾಲಿ ಟೂರ್ನಿಯಲ್ಲಿ ಗರಿಷ್ಛ ರನ್ ದಾಖಲೆ ಬರೆದ ಭಾರತ
ಭಾರತ ತಂಡ
Published On :

ಅಬುದಾಬಿ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಆಫ್ಧಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ಹಾಲಿ ಟೂರ್ನಿಯಲ್ಲಿ ಗರಿಷ್ಠ ರನ್ ಗಳ ದಾಖಲೆ ನಿರ್ಮಾಣ ಮಾಡಿದೆ.

ಹೌದು.. ಇಂದು ಅಬುದಾಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಫ್ಗನ್ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬ್ಯಾಟ್ಸಮನ್ ಗಳು ನಿಗದಿತ 20 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ ಬರೊಬ್ಬರಿ 210 ರನ್ ಗಳನ್ನು ಕಲೆ ಹಾಕಿದರು. 

Story image

ಟೀಂ ಇಂಡಿಯಾ ದಾಖಲಿಸಿದ ಈ 210 ರನ್ ಗಳ ಸ್ಕೋರ್ ಹಾಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಾಖಲಾದ ತಂಡವೊಂದರ ಗರಿಷ್ಠ ರನ್ ಗಳಿಕೆಯಾಗಿದೆ.  ಈ ಹಿಂದೆ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಇದೇ ಆಫ್ಗಾನಿಸ್ತಾನ ತಂಡ ಸಿಡಿಸಿದ್ದ 190 ರನ್ ಗಳು ಈವರೆಗೂ ಗರಿಷ್ಠ ಸ್ಕೋರ್ ಆಗಿ ದಾಖಲಾಗಿತ್ತು. 

ಆದರೆ ಇಂದು ಅದೇ ಅಫ್ಘಾನಿಸ್ತಾನದ ವಿರುದ್ಧ ಭಾರತ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿ ಅದನ್ನು 2ನೇ ಸ್ಥಾನಕ್ಕೆ ತಳ್ಳಿದೆ. ಅಬುದಾಬಿಯಲ್ಲಿ ನಡೆದ ಪಾಕಿಸ್ತಾನ ವರ್ಸಸ್ ನಮೀಬಿಯಾ ಪಂದ್ಯ ಮೂರನೇ ಸ್ಥಾನದಲ್ಲಿದ್ದು, ಆ ಪಂದ್ಯದಲ್ಲಿ ಪಾಕಿಸ್ತಾನ 189 ರನ್ ಗಳಿಸಿತ್ತು. ಅಲ್ ಅಮೆರಾಟ್ ನಲ್ಲಿ ನಡೆದ ಬಾಂಗ್ಲಾದೇಶ ಮತ್ತು ಪಪುವಾ ನ್ಯೂಗಿನಿಯಾ ನಡುವಿನ ಪಂದ್ಯ ನಾಲ್ಕನೇ ಸ್ಥಾನದಲ್ಲಿದ್ದು ಆ ಪಂದ್ಯದಲ್ಲಿ ಬಾಂಗ್ಲಾದೇಶ 181ರನ್ ಪೇರಿಸಿತ್ತು. 

Related Article

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ದಾಖಲೆ ಬರೆದ ಭಾರತ

ಟಿ20 ವಿಶ್ವಕಪ್: ಭರ್ಜರಿ ಬ್ಯಾಟಿಂಗ್ ಮೂಲಕ ದಾಖಲೆ ಬರೆದ ರೋ'ಹಿಟ್'-ರಾಹುಲ್ ಜೋಡಿ

ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ದೀಪಾವಳಿ ಗಿಫ್ಟ್: ಪೆಟ್ರೋಲ್-ಡೀಸೆಲ್ ದರದಲ್ಲಿ 7 ರೂ ಕಡಿತ

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 66 ರನ್ ಗಳ ಭರ್ಜರಿ ಜಯ

ಕಪಾಳಮೋಕ್ಷ ಪ್ರಕರಣ: ಪೊಲೀಸ್ ಎಂದು ತಿಳಿದಿರಲಿಲ್ಲ... ಕಾರ್ಯಕರ್ತ ಎಂದು ಭಾವಿಸಿದ್ದೆ: ಮಾಜಿ ಶಾಸಕ ಪಾಪರೆಡ್ಡಿ ಸ್ಪಷ್ಟನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.