ಟಿ20 ವಿಶ್ವಕಪ್: ಶ್ರೀಲಂಕಾ ಭರ್ಜರಿ ಆಟ: ಹಾಲಿ ಚಾಂಪಿಯನ್ ವಿಂಡೀಸ್ ಟೂರ್ನಿಯಿಂದಲೇ ಔಟ್
ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಶ್ರೀಲಂಕಾ ತಂಡ 20 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ಟೂರ್ನಿಯಿಂದಲೇ ಹೊರಬಿದ್ದಿದೆ.

ಅಬುದಾಬಿ: ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಶ್ರೀಲಂಕಾ ತಂಡ 20 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ಟೂರ್ನಿಯಿಂದಲೇ ಹೊರಬಿದ್ದಿದೆ.
ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ನಿಗದಿತ 20 ಓವರ್ ಗಳಲ್ಲಿ ನಿಸ್ಸಾಂಕಾ (51 ರನ್) ಮತ್ತು ಅಸಲಂಕಾ (68 ರನ್) ಅವರ ಅರ್ಧಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 189ರನ್ ಗಳಿಸಿತು. ಗೆಲ್ಲಲು 10 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 169ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 20 ರನ್ ಗಳ ಅಂತರದಲ್ಲಿ ಸೋಲು ಕಂಡಿತು.
It's the result we had hoped for!
Sri Lanka ended #T20WorldCup 2021 campaign with a fine victory!
Thank you to all our fans for your support! #RoaringForGlory #ApeKollo pic.twitter.com/DIa4x1KP3Y
— Sri Lanka Cricket
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


