ನ್ಯೂಜಿಲ್ಯಾಂಡ್ ವಿರುದ್ಧ ಟಿ-20 ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್ ಶರ್ಮಾ ನಾಯಕ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ ನ್ಯೂಜಿಲ್ಯಾಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಟಿ-20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ.

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ ನ್ಯೂಜಿಲ್ಯಾಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಟಿ-20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ.
ಉಪನಾಯಕನ ಜವಾಬ್ದಾರಿ ಕೆಎಲ್ ರಾಹುಲ್ ಅವರಿಗೆ ವಹಿಸಲಾಗಿದೆ. 16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಇನ್ನು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ವೆಂಕಟೇಶ್ ಅಯ್ಯರ್ ಹಾಗೂ ಅವೇಶ್ ಖಾನ್ ಅವರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಯುಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್ಗಳಾಗಿ ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ತಂಡದಲ್ಲಿದ್ದಾರೆ.
ಭಾರತದ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


