ಟಿ20 ವಿಶ್ವಕಪ್: ಪಾಕ್ ಮಣಿಸಿ, ರನ್ ಚೇಸಿಂಗ್ ನಲ್ಲೂ ದಾಖಲೆ ಬರೆದ ಆಸಿಸ್
ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ವಿರೋಚಿತ ಗೆಲುವು ಸಾಧಿಸಿ ಪಾಕಿಸ್ತಾನವನ್ನು ಟೂರ್ನಿಯಿಂದ ಹೊರದಬ್ಬಿದ ಆಸ್ಟ್ರೇಲಿಯಾ ಅದೇ ಪಂದ್ಯದಲ್ಲಿ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದೆ.

ದುಬೈ: ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ವಿರೋಚಿತ ಗೆಲುವು ಸಾಧಿಸಿ ಪಾಕಿಸ್ತಾನವನ್ನು ಟೂರ್ನಿಯಿಂದ ಹೊರದಬ್ಬಿದ ಆಸ್ಟ್ರೇಲಿಯಾ ಅದೇ ಪಂದ್ಯದಲ್ಲಿ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದೆ.
ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲೇ ಭಾರತವನ್ನು ಮಣಿಸಿ ಟೂರ್ನಿಯುದ್ದಕ್ಕೂ ಅಜೇಯವಾಗಿ ಉಳಿದಿದ್ದ ಪಾಕಿಸ್ತಾನ ತಂಡ ನಿನ್ನೆ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿರೋಚಿತ ಸೋಲು ಅನುಭವಿಸಿ ಟೂರ್ನಿಯಿಂದ ಹೊರಬಿದ್ದಿದೆ. ಈ ವಿರೋಚಿತ ಪಂದ್ಯದಲ್ಲಿ ಸಿಕ್ಸರ್ ಗಳ ಸುರಿಮಳೆಯನ್ನೇ ಗರೆದ ಆಸಿಸ್ ತಂಡ ವಿಶಿಷ್ಠ ದಾಖಲೆಯೊಂದನ್ನು ನಿರ್ಮಿಸಿದೆ.
ಹೌದು.. ಪಾಕಿಸ್ತಾನ ನೀಡಿದ 177 ರನ್ ಗಳ ಗುರಿಯನ್ನು 5 ವಿಕೆಟ್ ನಷ್ಟಕ್ಕೆ ಕೇವಲ19 ಓವರ್ ಗಳಲ್ಲಿಯೇ ಪೂರ್ಣಗೊಳಿಸಿದ ಆಸ್ಟ್ರೇಲಿಯಾ ತಂಡ ರನ್ ಚೇಸಿಂಗ್ ನಲ್ಲಿ ದಾಖಲೆ ನಿರ್ಮಿಸಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಯಶಸ್ವೀ ರನ್ ಚೇಸಿಂಗ್ ನಲ್ಲಿ ಗರಿಷ್ಠ ಸ್ಕೋರ್ ಮಾಡಿದ 2ನೇ ತಂಡ ಎಂಬ ಕೀರ್ತಿಗೆ ಆಸ್ಟ್ರೇಲಿಯಾ ಭಾಜನವಾಗಿದೆ.

ನಿನ್ನೆ ಪಾಕಿಸ್ತಾನ ವಿರುದ್ಧ ದುಬೈ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಚ್ರೇಲಿಯಾ ತಂಡ ಕೊನೆಯ ಐದು ಓವರ್ ನಲ್ಲಿ ಬರೊಬ್ಬರಿ 62 ರನ್ ಗಳನ್ನು ಭಾರಿಸುವ ಮೂಲಕ ಈ ದಾಖಲೆಗೆ ಪಾತ್ರವಾಗಿದೆ. ಈ ಹಿಂದೆ 2010ರಲ್ಲಿ ನಡೆದ ಟಿ20 ಟೂರ್ನಿಯಲ್ಲಿ ಇದೇ ಪಾಕಿಸ್ತಾನ ಇದೇ ಆಸ್ಟ್ರೇಲಿಯಾ ತಂಡದ ವಿರುದ್ಧ ಕೊನೆಯ ಐದು ಓವರ್ ನಲ್ಲಿ 75ರನ್ ಸಿಡಿಸಿತ್ತು. ಇದು ಈ ವರೆಗಿನ ಗರಿಷ್ಠ ದಾಖಲೆಯಾಗಿದೆ. ಇದೀಗ ಈ ಪಟ್ಟಿಯಲ್ಲಿ ಆಸ್ಚ್ರೇಲಿಯಾ 2ನೇ ಸ್ಥಾನಕ್ಕೇರಿದ್ದು, 2010ರ ಟೂರ್ನಿಯಲ್ಲಿ ಭಾರತದ ವಿರುದ್ದದ ಪಂದ್ಯದಲ್ಲಿ ಕೊನೆಯ ಐದು ಓವರ್ ನಲ್ಲಿ 60ರನ್ ಗಳಿಸಿರುವ ಶ್ರೀಲಂಕಾ 3ನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


