5 ಕೋಟಿ ರೂಪಾಯಿ ಮೌಲ್ಯದ ವಾಚ್ ಗಳ ಜಪ್ತಿ: ಹಾರ್ದಿಕ್ ಪಾಂಡ್ಯ ಕಕ್ಕಾಬಿಕ್ಕಿ!
ಭಾನುವಾರ ರಾತ್ರಿ ಎರಡು ದುಬಾರಿ ವಾಚ್‌ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಅವರನ್ನು ತಡೆದಿದ್ದರು.

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರಿಗೆ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಯುಎಇಯಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಿ ಭಾರತಕ್ಕೆ ಮರಳುತ್ತಿರುವ ಪಾಂಡ್ಯ ವಿರುದ್ಧ ಕಸ್ಟಮ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.
ಭಾನುವಾರ ರಾತ್ರಿ ಎರಡು ದುಬಾರಿ ವಾಚ್‌ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಅವರನ್ನು ತಡೆದಿದ್ದರು. ಕೈಗಡಿಯಾರುಗಳು ಹೇಗೆ ಬಂದ್ವು? ಎಲ್ಲಿ ಖರೀದಿ ಮಾಡಿದ್ರಿ? ಇವುಗಳ ಬಿಲ್ ಎಲ್ಲಿ ಅಂತಾ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ.
ಆದ್ರೆ, ಆಲ್ ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಅಧಿಕಾರಿಗಳ ಯಾವ ಪ್ರಶ್ನೆಗೂ ಸಮರ್ಪಕ ಉತ್ತರ ನೀಡಿಲ್ಲ. ಅಲ್ಲದೆ ದುಬಾರಿ ವಾಚ್ ಗಳಿಗೆ ಸಂಬಂಧಿಸಿದಂತೆ ಬಿಲ್‌ನ್ನು ಸಹ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಎರಡೂ ವಾಚುಗಳನ್ನು ಜಪ್ತಿ ಮಾಡಿಕೊಂಡಿದೆ. ಎರಡೂ ಕೈಗಡಿಯಾರಗಳ ಬೆಲೆ ಸುಮಾರು 5 ಕೋಟಿ ರೂಪಾಯಿ ಇರಬಹುದು ಎಂದು ಹೇಳಲಾಗುತ್ತಿದೆ.
ಹಾರ್ದಿಕ್ ಪಾಂಡ್ಯ ಭಾನುವಾರ ತಂಡದೊಂದಿಗೆ ಮನೆಗೆ ಮರಳಿದರು. ಆದರೆ ಅವರನ್ನು ಏರ್ಪೋರ್ಟ್ನಲ್ಲೇ ತಡೆದ ಕಸ್ಟಮ್ಸ್ ಇಲಾಖೆ ಅವರ ದುಬಾರಿ ವಾಚ್‌ಗಳನ್ನು ಜಪ್ತಿ ಮಾಡಿದೆ ಎಂದು ವರದಿಯಾಗಿದೆ. ಹಾರ್ದಿಕ್ ವಿಶ್ವದ ಅತ್ಯಂತ ದುಬಾರಿ ವಾಚ್‌ಗಳನ್ನು ಹೊಂದಿದ್ದಾರೆ ಮತ್ತು ಅವರ ವಾಚ್ ಸಂಗ್ರಹವು ಪಾಟೆಕ್ ಫಿಲಿಪ್ ನಾಟಿಲಸ್ ಪ್ಲಾಟಿನಂ 5711 ಅನ್ನು ಸಹ ಒಳಗೊಂಡಿದೆ. ಇದರ ಬೆಲೆ ಬರೋಬ್ಬರಿ 5 ಕೋಟಿ ರೂ. ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


