2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಪಾಕಿಸ್ತಾನ ಆಯೋಜನೆ; ಮೂರು ಐಸಿಸಿ ಟೂರ್ನಿಗಳಿಗೆ ಭಾರತ ಆತಿಥ್ಯ
ರಡು ದಶಕಗಳ ನಂತರ ಪಾಕಿಸ್ತಾನಕ್ಕೆ ದೊಡ್ಡ ಕ್ರಿಕೆಟ್ ಟೂರ್ನಿ ಆಯೋಜಿಸುವ ಅವಕಾಶ ಸಿಕ್ಕಿದೆ. 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಪಾಕ್ ಆಯೋಜಿಸಲಿದೆ.

ದುಬೈ: ಎರಡು ದಶಕಗಳ ನಂತರ ಪಾಕಿಸ್ತಾನಕ್ಕೆ ದೊಡ್ಡ ಕ್ರಿಕೆಟ್ ಟೂರ್ನಿ ಆಯೋಜಿಸುವ ಅವಕಾಶ ಸಿಕ್ಕಿದೆ. 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಪಾಕ್ ಆಯೋಜಿಸಲಿದೆ.
ಬಿಸಿಸಿಐ 2023 ರಿಂದ 2031ರ ಅವಧಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಮೂರು ವಿಶ್ವಮಟ್ಟದ ಟೂರ್ನಿಗಳಿಗೆ ಆತಿಥ್ಯ ವಹಿಸಲಿದೆ. 2026ರ ಟಿ-20 ವಿಶ್ವಕಪ್, 2029ರ ಚಾಂಪಿಯನ್ಸ್ ಟ್ರೋಫಿ ಮತ್ತು 2031ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗಳಿಗೆ ಭಾರತ ಆತಿಥ್ಯ ವಹಿಸುವುದು.
ಪಾಕ್ ಕ್ರಿಕೆಟ್ ಮಂಡಳಿ ಬಹುತೇಕ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಟೂರ್ನಿ ಆಯೋಜಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಐಸಿಸಿ ಮಂಗಳವಾರ ಬಿಡುಗಡೆ ಮಾಡಿರುವ ವೇಳಾಪಟ್ಟಿ ಪ್ರಕಾರ, 2024ರಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಟಿ-20 ವಿಶ್ವಕಪ್ ಆಯೋಜಿಸಲಿವೆ. ಉತ್ತರ ಅಮೆರಿಕ ಆತಿಥ್ಯ ವಹಿಸಲಿರುವ ಪ್ರಥಮ ವಿಶ್ವ ಮಟ್ಟದ ಟೂರ್ನಿ ಇದಾಗಿದೆ.
11 ಪೂರ್ಣವಧಿ ಸದಸ್ಯ ರಾಷ್ಟ್ರಗಳು ಮತ್ತು ಮೂರು ಸಹ ಸದಸ್ಯ ರಾಷ್ಟ್ರಗಳನ್ನು ಎರಡು ಏಕದಿನ ವಿಶ್ವಕಪ್, ನಾಲ್ಕು ಟಿ-20 ವಿಶ್ವಕಪ್ ಮತ್ತು ಎರಡು ಚಾಂಪಿಯನ್ಸ್ ಟ್ರೋಫಿ ಟೂರ್ನಿಗಳನ್ನು ಆಯೋಜಿಸಲು ಆಯ್ಕೆ ಮಾಡಲಾಗಿದೆ ಎಂದು ಐಸಿಸಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


