ಕ್ರಿಕೆಟ್

ಪ್ರಥಮ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ

ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಪ್ರಥಮ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ
ಟೀಂ ಇಂಡಿಯಾ ಆಟಗಾರರು
Published On :

ಜೈಪುರ: ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ. 

ಇಲ್ಲಿನ ಸವಾಯ್ ಮನ್ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ   ನ್ಯೂಜಿಲೆಂಡ್ ತಂಡ ಮಾರ್ಟಿನ್ ಗುಪ್ಟಿಲ್ ಅವರ ಆಕರ್ಷಕ  70 ಮತ್ತು ಮಾರ್ಕ್ ಚಾಪ್ ಮನ್ ಅವರ 63 ರನ್ ಗಳ ನೆರವಿನಿಂದ 164 ರನ್ ಕಲೆ ಹಾಕಿತು.

ನ್ಯೂಜಿಲೆಂಡ್ ನೀಡಿದ್ದ ಸವಾಲಿನ 164  ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ  ಟೀಂ ಇಂಡಿಯಾ 19.4 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್ ಗಳಿಸುವುದರೊಂದಿಗೆ ವಿಜಯದ ನಗೆ ಬೀರಿತು.

ಆರಂಭಿಕ ಆಟಗಾರ ಕೆ.ಎಲ್. ರಾಹುಲ್ 15, ರೋಹಿತ್ ಶರ್ಮಾ 48, ಸೂರ್ಯ ಕುಮಾರ್ ಯಾದವ್ ಆಕರ್ಷಕ 62 ಹಾಗೂ ರಿಷಭ್ ಪಂತ್ 17, ಶ್ರೇಯಸ್ ಅಯ್ಯರ್  ಅವರ 5 ರನ್ ಗಳ ನೆರವಿನೊಂದಿಗೆ ಟೀಂ ಇಂಡಿಯಾ ಕಿವೀಸ್ ವಿರುದ್ಧ ಗೆಲುವು ಸಾಧಿಸಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.