ಕಿವೀಸ್ ವಿರುದ್ಧದ ಮೊದಲ ಟೆಸ್ಟ್: ಕೆಎಲ್ ರಾಹುಲ್ ಹೊರಕ್ಕೆ; ಸೂರ್ಯಕುಮಾರ್ ಯಾದವ್ ತಂಡಕ್ಕೆ ಸೇರ್ಪಡೆ!
ಗಾಯದ ಸಮಸ್ಯೆಯಿಂದಾಗಿ ಗುರುವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹೊರಗುಳಿಯಲ್ಲಿದ್ದಾರೆ.

ನವದೆಹಲಿ: ಗಾಯದ ಸಮಸ್ಯೆಯಿಂದಾಗಿ ಗುರುವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹೊರಗುಳಿಯಲಿದ್ದು, ಇಂಗ್ಲೆಂಡ್ ಪ್ರವಾಸ ಸಂದರ್ಭದಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿದ್ದ ಸೂರ್ಯ ಕುಮಾರ್ ಯಾದವ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಕೆಎಲ್ ರಾಹುಲ್ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ಹೇಳಿವೆ. ಕಾನ್ಫುರದ ಗ್ರೀನ್ ಪಾರ್ಕ್ ಸ್ಡೇಡಿಯಂನಲ್ಲಿ ಇಂದು ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾದ ಎಲ್ಲಾ ಆಟಗಾರರು ಇದ್ದರು. ಆದರೆ, ರಾಹುಲ್ ಕಾಣಿಸಿಕೊಳ್ಳಲಿಲ್ಲ.
ರಾಹುಲ್ ಆಗಿರುವ ಗಾಯದ ಬಗ್ಗೆಸ್ಪಷ್ಟವಾಗಿ ತಿಳಿಯುತ್ತಿಲ್ಲ. ನೆಟ್ ಪ್ರಾಕ್ಟೀಸ್ ನಲ್ಲಿ ಮಾಯಾಂಕ್ ಅಗರ್ ವಾಲ್ ಜೊತೆಯಲ್ಲಿ ಸುಬ್ ಮನ್ ಗಿಲ್ ಬ್ಯಾಟಿಂಗ್ ಮಾಡುತ್ತಿದ್ದ ದೃಶ್ಯ ಕಂಡುಬಂದಿತ್ತು. ಚೇತೇಶ್ವರ ಪೂಜಾರಾ ಕೂಡಾ ಬ್ಯಾಟಿಂಗ್ ಮಾಡುತ್ತಿದ್ದರು. ರಾಹುಲ್ ಅವರ ಗೈರು ಹಿನ್ನೆಲೆಯಲ್ಲಿ ಅವರ ಸ್ಥಾನದಲ್ಲಿ ಯುವ ಆಟಗಾರ ಸೂರ್ಯ ಕುಮಾರ್ ಯಾದವ್ ಅವರನ್ನು ಆಡಲು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


