ಐಪಿಎಲ್ 2021: ರಾಜಸ್ಥಾನವನ್ನು 8 ವಿಕೆಟ್ ಗಳಿಂದ ಮಣಿಸಿದ ಮುಂಬೈ, ಪ್ಲೇ ಆಫ್ ಆಸೆ ಜೀವಂತ
ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ 51ನೇ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ 51ನೇ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್ ಗಳಲ್ಲಿ 9 ವಿಕೆಟ್ ಗೆ 90 ರನ್ ಸೇರಿಸಿತು. ರಾಯಲ್ಸ್ ತಂಡದ ಎವಿನ್ ಲೂಯಿಸ್ 24 ಮತ್ತು ಯಶಸ್ವಿ ಜೈಸ್ವಾಲ್ 12 ರನ್ ಗಳಿಂದ ಉತ್ತಮ ಆರಂಭ ನೀಡುವ ಪ್ರಯತ್ನದಲ್ಲಿದ್ದರು. ಆದರೆ, ಕೌಲ್ಟರ್ ನೈಲ್ ಅದಕ್ಕೆ ಆಸ್ಪದ ನೀಡಲಿಲ್ಲ. ನಾಲ್ಕನೇ ಓವರ್ ನಲ್ಲಿ ಜೈಸ್ವಾಲ್ ವಿಕೆಟ್ ಪಡೆದರು. ನಂತರದ 63 ರನ್ ಗಳ ಅಂತರದಲ್ಲಿ ಎಂಟು ವಿಕೆಟ್ ಗಳು ಪತನವಾದವು.
ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನಾಯಕ ರೋಹಿತ್ ಶ್ರಮಾ 22, ಇಶಾನ್ ಕಿಶಾನ್ 50 ಹಾಗೂ ಸೂರ್ಯ ಕುಮಾರ್ 13 ರನ್ ಗಳಿಸುವುದರೊಂದಿಗೆ 8.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 94 ರನ್ ಸೇರಿಸಿ ಸುಲಭ ಜಯ ಸಾಧಿಸಿತು. ಕೌಲ್ಟರ್ ನೈಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


