ಕ್ರಿಕೆಟ್

ಐಪಿಎಲ್ 2021: ಹೈದ್ರಾಬಾದ್ ವಿರುದ್ಧ 42 ರನ್ ಗಳಿಂದ ಗೆದ್ದ ಮುಂಬೈ, ಪ್ಲೇ-ಆಫ್ ಕನಸು ಭಗ್ನ

ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 42 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದರೂ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಹಂತ ಪ್ರವೇಶಿಸುವಲ್ಲಿ ವಿಫಲವಾಗಿದೆ.

ಐಪಿಎಲ್ 2021: ಹೈದ್ರಾಬಾದ್ ವಿರುದ್ಧ 42 ರನ್ ಗಳಿಂದ ಗೆದ್ದ ಮುಂಬೈ, ಪ್ಲೇ-ಆಫ್ ಕನಸು ಭಗ್ನ
ಮುಂಬೈ ಇಂಡಿಯನ್ಸ್ ತಂಡದ ಆಟಗಾರರು
Published On :

ಅಬುದಾಬಿ: ಇಲ್ಲಿನ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 42 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದರೂ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಹಂತ ಪ್ರವೇಶಿಸುವಲ್ಲಿ ವಿಫಲವಾಗಿದೆ. ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆ ಯಿಟ್ಟಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಪರ ಇಶಾನ್ ಕಿಶನ್ 84, ಸೂರ್ಯಕುಮಾರ್ ಯಾದವ್ 82, ನಾಯಕ ರೋಹಿತ್ ಶರ್ಮಾ 18 ರನ್ ಗಳ ನೆರವಿನೊಂದಿಗೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಬೃಹತ್ 235 ರನ್ ಗಳಿಸಿತು.

ಈ ಗುರಿ ಬೆನ್ನತ್ತಿದ್ದ ಸನ್ ರೈಸರ್ಸ್ ಹೈದ್ರಾಬಾದ್ ಪರ ಮನೀಶ್ ಪಾಂಡೆ 69, ಜೇಸನ್ ರಾಯ್ 34, ಅಭಿಷೇಕ್ ಶರ್ಮಾ ಅವರ 33 ರನ್ ಗಳ ನೆರವಿನೊಂದಿಗೆ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಷ್ಟೇ ಶಕ್ತವಾಯಿತು. ಇದರೊಂದಿಗೆ 42 ರನ್ ಗಳ ಅಂತರದೊಂದಿಗೆ ಹೈದ್ರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿತು. ಇಶಾನ್ ಕಿಶನ್ ಪಂದ್ಯ ಶ್ರೇಷ್ಟ ಆಟಗಾರ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.