ಐಪಿಎಲ್ ಎಲಿಮಿನೇಟರ್ ಪಂದ್ಯ: ಕೋಲ್ಕತ್ತಾಗೆ ಸಾಧಾರಣ ಮೊತ್ತದ ಗುರಿ ನೀಡಿದ ಆರ್ ಸಿಬಿ, ಇಲ್ಲಿದೆ ಸ್ಕೋರ್ ವಿವರ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾಗೆ ಸಾಧಾರಣ ಮೊತ್ತದ ಗುರಿ ನೀಡಿದೆ.

ಶಾರ್ಜಾ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾಗೆ ಸಾಧಾರಣ ಮೊತ್ತದ ಗುರಿ ನೀಡಿದೆ.
ಶಾರ್ಜಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 138 ರನ್ ಬಾರಿಸಿದ್ದು ಕೋಲ್ಕತ್ತಾ ಗೆಲ್ಲಲು 139 ರನ್ ಗಳ ಗುರಿ ನೀಡಿದೆ.
ಆರಂಭಿಕವಾಗಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ 21 ರನ್ ಗಳಿಸಿ ಔಟಾಗಿದ್ದರೆ, ವಿರಾಟ್ ಕೊಹ್ಲಿ 39 ರನ್ ಪೇರಿಸಿದ್ದಾರೆ. ಇನ್ನುಳಿದಂತೆ ಯಾರು ಅಬ್ಬರ ಬ್ಯಾಟಿಂಗ್ ಮಾಡದ ಕಾರಣ ಆರ್ ಸಿಬಿ 138 ರನ್ ಗಳಿಸಷ್ಟೇ ಸಾಧ್ಯವಾಯಿತು.
ಕೋಲ್ಕತ್ತಾ ಪರ ಬೌಲಿಂಗ್ ನಲ್ಲಿ ಸುನಿಲ್ ನರೈನ್ ಮಿಂಚಿದ್ದು 4 ವಿಕೆಟ್ ಪಡೆದಿದ್ದಾರೆ. ಇನ್ನು ಫರ್ಗ್ಯೂಸನ್ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


