ಕ್ರಿಕೆಟ್

ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ: ಅಕ್ಸರ್ ಪಟೇಲ್ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ!

ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆ ನಡೆಸಿರುವ ಟೀಂ ಇಂಡಿಯಾದಲ್ಲಿ ದಿಢೀರ್ ಬದಲಾವಣೆ ಮಾಡಲಾಗಿದ್ದು, ತಂಡಕ್ಕೆ ಆಯ್ಕೆಯಾಗಿದ್ದ ಅಕ್ಸರ್ ಪಟೇಲ್ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ: ಅಕ್ಸರ್ ಪಟೇಲ್ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ!
ಟೀಂ ಇಂಡಿಯಾ
Published On :

ಮುಂಬೈ: ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆ ನಡೆಸಿರುವ ಟೀಂ ಇಂಡಿಯಾದಲ್ಲಿ ದಿಢೀರ್ ಬದಲಾವಣೆ ಮಾಡಲಾಗಿದ್ದು, ತಂಡಕ್ಕೆ ಆಯ್ಕೆಯಾಗಿದ್ದ ಅಕ್ಸರ್ ಪಟೇಲ್ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಶೂರ್ದೂಲ್ ಠಾಕೂರ್ ರನ್ನು ತಂಡದ ಪ್ರಮುಖ 15 ಆಟಗಾರರ ಪಟ್ಟಿಗೆ ಸೇರಿಸಲಾಗಿದ್ದು, ಅಕ್ಸರ್ ಪಟೇಲ್ ರನ್ನು ಹೆಚ್ಚುವರಿ ಆಟಗಾರರ ಪಟ್ಟಿಗೆ ಸೇರಿಸಲಾಗಿದೆ. 

ಅಂತೆಯೇ ಈ ಹಿಂದೆ ಐಪಿಎಲ್ ಗಮನ ಸೆಳೆದಿದ್ದ ಆಟಗಾರರಾದ ಅವೇಶ್ ಖಾನ್, ಉಮ್ರಾನ್ ಮಲಿಕ್, ಹರ್ಷಲ್ ಪಟೇಲ್, ಲುಕ್ಮನ್ ಮೇರಿವಾಲಾ, ವೆಂಕಟೇಶ್ ಅಯ್ಯರ್, ಕರ್ನ್ ಶರ್ಮಾ, ಶಹಬಾಜ್ ಅಹ್ಮದ್ ಮತ್ತು ಕೆ. ಗೌತಮ್ ಕೂಡ ದುಬೈನಲ್ಲಿರುವ ಟೀಂ ಇಂಡಿಯಾ ಸದಸ್ಯರೊಂದಿಗೆ ಬಯೋಬಬಲ್ ಸೇರಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ ನೀಡಿದ್ದಾರೆ. 

ಆಟಗಾರರ ಪಟ್ಟಿ ಇಂತಿದೆ: 
ಪ್ರಮುಖ 15 ಆಟಗಾರರ ಪಟ್ಟಿ

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ 

ಹೆಚ್ಚುವರಿ ಆಟಗಾರರು
ಶ್ರೇಯಸ್ ಅಯ್ಯರ್, ದೀಪಕ್ ಚಹರ್, ಅಕ್ಸರ್ ಪಟೇಲ್

ದುಬೈನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಭಾರತ ತಂಡ ಅಕ್ಟೋಬರ್ 24ರಂದು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದೊಂದಿಗೆ ಪಂದ್ಯವನ್ನಾಡುವ ಮೂಲಕ ತನ್ನ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.