ಕ್ರಿಕೆಟ್

ಟೀಮ್ ಇಂಡಿಯಾ ಕೋಚ್ ಹುದ್ದೆ ವಹಿಸಿಕೊಳ್ಳಲಿರುವ 'ಗ್ರೇಟ್ ವಾಲ್ ಆಫ್ ಇಂಡಿಯಾ' ರಾಹುಲ್ ದ್ರಾವಿಡ್

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರು ದುಬೈನಲ್ಲಿ ದ್ರಾವಿಡ್ ರನ್ನು ಭೇಟಿಯಾಗಿದ್ದರು.

ಟೀಮ್ ಇಂಡಿಯಾ ಕೋಚ್ ಹುದ್ದೆ ವಹಿಸಿಕೊಳ್ಳಲಿರುವ 'ಗ್ರೇಟ್ ವಾಲ್ ಆಫ್ ಇಂಡಿಯಾ' ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್
Published On :

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತ ಕ್ರಿಕೆಟ್ ಮಂಡಳಿ ಬಿಸಿಸಿಐ, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ರನ್ನು ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ಮನವೊಲಿಸುವಲ್ಲಿ ಸಫಲವಾಗಿದೆ.

ಈ ಹಿಂದೆ ಈ ಸ್ಥಾನವನ್ನು ದ್ರಾವಿಡ್ ನಿರಾಕರಿಸಿದ್ದರ ಹೊರತಾಗಿಯೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರು ದುಬೈನಲ್ಲಿ ದ್ರಾವಿಡ್ ರನ್ನು ಭೇಟಿಯಾಗಿದ್ದರು. 

ದೀರ್ಘ ಕಾಲದ ಸಂಧಾನದ ನಂತರ ರಾಹುಲ್ ದ್ರಾವಿಡ್ 2 ವರ್ಷ ಅವಧಿಗೆ ಟೀಮ್ ಇಂಡಿಯಾ ಕೋಚ್ ಹುದ್ದೆ ನಿರ್ವಹಿಸಲು ಸಮ್ಮತಿ ಸೂಚಿಸಿದ್ದಾರೆ. 

ಸದ್ಯದ ಕೋಚ್ ರವಿ ಶಾಸ್ತ್ರಿ ವಿಶ್ವಕಪ್ ನಂತರ ಕೋಚ್ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆಯೇ ಬಿಸಿಸಿಐ ರಾಹುಲ್ ದ್ರಾವಿಡ್ ರ ಬೆನ್ನು ಬಿದ್ದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.