ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕಲ್ ಸ್ಲೇಟರ್ ರನ್ನು ಬಂಧಿಸಿದ ಪೊಲೀಸರು, ಯಾಕೆ ಗೊತ್ತ?
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕೆಲ್ ಸ್ಲೇಟರ್ ಅವರನ್ನು ಬಂಧಿಸಲಾಗಿದೆ.

ಸಿಡ್ನಿ: ಕೌಟುಂಬಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕೆಲ್ ಸ್ಲಾಟರ್ ಅವರನ್ನು ಬಂಧಿಸಲಾಗಿದೆ.
ಸಿಡ್ನಿಯ ಮ್ಯಾನ್ಲಿಯಲ್ಲಿರುವ ನಿವಾಸದಲ್ಲಿ ಸ್ಲಾಟರ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವಾರದ ಹಿಂದೆ ನಡೆದ ಘಟನೆಯ ಆಧಾರದ ಮೇಲೆ ಸಲ್ಲಿಸಲಾದ ದೂರಿನ ಮೇಲೆ ಆತನನ್ನು ಬಂಧಿಸಲಾಗಿದೆ ಎಂದು ನ್ಯೂ ಸೌತ್ ವೇಲ್ಸ್ ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ... "ಅಕ್ಟೋಬರ್ 12 ರಂದು ... ಕೌಟುಂಬಿಕ ದೌರ್ಜನ್ಯ ಘಟನೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲಾಗಿದೆ. ಈ ಹಿನ್ನಲೆಯಲ್ಲಿ ಮಂಗಳವಾರ ಪೂರ್ವ ಉಪ ನಗರ ಪೊಲೀಸರು ತನಿಖೆ ಆರಂಭಿಸಿ, ಅದರ ಆಧಾರದ ಮೇಲೆ ಬುಧವಾರ ಬೆಳಗ್ಗೆ 9:20 ಕ್ಕೆ ಆತನನ್ನು ಬಂಧಿಸಲಾಗಿದೆ ಎಂಬ ಹೇಳಿಕೆ ಬಿಡುಗಡೆಗೊಳಿಸಲಾಗಿದೆ. ಆದರೆ ಘಟನೆಗೆ ಸಂಬಂಧಿಸಿದ ಪೂರ್ಣ ವಿವರಗಳು ಲಭ್ಯವಾಗಬೇಕಿದೆ.
ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದ ಮೈಕೆಲ್ ಸ್ಲಾಟರ್ ಟೆಸ್ಟ್ ಬ್ಯಾಟಿಂಗ್ ಅಗ್ರ ಕ್ರಮಾಂಕದಲ್ಲಿ ಸ್ಥಾನ ಪಡೆದಿದ್ದರು. ಸ್ಲಾಟರ್ ಅವರ ವೃತ್ತಿಜೀವನದಲ್ಲಿ ಒಟ್ಟು 5,312 ರನ್ ಗಳಿಸಿದ್ದರು. 2004 ರಲ್ಲಿ ಅವರು ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ನಂತರ ಪ್ರಸಾರಕ, ವಿಕ್ಷಕ ವಿವರಣೆ ತಜ್ಞರಾಗಿ ಗುರುತಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


