ಹೊಸ ಐಪಿಎಲ್ ತಂಡಕ್ಕೆ ರಣವೀರ್, ದೀಪಿಕಾ ಜೋಡಿ ಬಿಡ್!
2022ರ ಐಪಿಎಲ್ ತಂಡ ಖರೀದಿ ಮಾಡಲು ಮತ್ತೊಂದು ಬಾಲಿವುಡ್ ಜೋಡಿ ತುದಿಗಾಲಲ್ಲಿ ನಿಂತಿದ್ದು, ಬಿಟೌನ್ ನ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಜೋಡಿ ಮುಂಬರುವ 2022ರ ಐಪಿಎಲ್ ಗ್ರೌಂಡ್ ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಮುಂಬೈ: 2022ರ ಐಪಿಎಲ್ ತಂಡ ಖರೀದಿ ಮಾಡಲು ಮತ್ತೊಂದು ಬಾಲಿವುಡ್ ಜೋಡಿ ತುದಿಗಾಲಲ್ಲಿ ನಿಂತಿದ್ದು, ಬಿಟೌನ್ ನ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಜೋಡಿ ಮುಂಬರುವ 2022ರ ಐಪಿಎಲ್ ಗ್ರೌಂಡ್ ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಐಪಿಎಲ್ ಫ್ರಾಂಚೈಸಿ ಕುರಿತು ಈವರೆಗೆ ದೀಪಿಕಾ ಹಾಗೂ ರಣವೀರ್ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ, ಮೂಲಗಳ ಪ್ರಕಾರ ಮುಂಬರುವ ಐಪಿಎಲ್ ನಲ್ಲಿ ಟೀಮ್ ವೊಂದನ್ನು ಖರೀದಿಗಾಗಿ ಬಿಡ್ ಮಾಡಲು ಈ ಜೋಡಿ ಉತ್ಸುಕರಾಗಿದ್ದಾರೆ ಎಂದು ತಿಳಿದುಬಂದಿದೆ.
ಐಪಿಎಲ್ ನಲ್ಲಿ ಬಿಟೌನ್ ಮಂದಿ ಫ್ರಾಂಚೈಸಿ ಆಗೋದು ಹೊಸದೇನಲ್ಲ. ಈಗಾಗಲೇ ಶಾರುಖ್ ಖಾನ್, ಪ್ರೀತಿ ಜಿಂಟಾ, ಜೂಹಿ ಚಾವ್ಲಾ, ಶಿಲ್ಪಾ ಶೆಟ್ಟಿ ಕ್ರಿಕೆಟ್ ತಂಡಗಳನ್ನು ಖರೀದಿ ಮಾಡಿದ್ದಾರೆ. ಈಗಾಗಲೇ ನೂತನ 2 ತಂಡಗಳ ಫ್ರಾಂಚೈಸಿಗಾಗಿ ಬಿಡ್ ಮಾಡಲು ಮುಹೂರ್ತ ನಿಗದಿಯಾಗಿದೆ.
ಅಕ್ಟೋಬರ್ 25 ರಿಂದ ಬಿಡ್ಡಿಂಗ್?
2022ರ ಐಪಿಎಲ್ ಟೂರ್ನಿಗಾಗಿ 2 ತಂಡಗಳು ಹೊಸದಾಗಿ ಸೇರ್ಪಡೆಯಾಗಲಿವೆ ಅಂತಾ ಈಗಾಗಲೇ ಬಿಸಿಸಿಐ ತಿಳಿಸಿದೆ. ಆದ್ದರಿಂದ ಮುಂಬರುವ ಐಪಿಎಲ್ ಟೂರ್ನಿಗಾಗಿ ಎರಡು ಫ್ರಾಂಚೈಸಿಗಳ ಆಯ್ಕೆಗಾಗಿ ಬಿಡ್ಡಿಂಗ್ ನಡೆಯಲಿದೆ. ಅಕ್ಟೋಬರ್ 25ರಿಂದ ಬಿಡ್ಡಿಂಗ್ ನಡೆಯುವ ಸಾಧ್ಯತೆ ಇದೆ. ಅತೀ ಹೆಚ್ಚು ಬಿಡ್ಡರ್ಸ್ ಗೆ ತಂಡದ ಫ್ರಾಂಚೈಸಿ ಹಕ್ಕು ನೀಡಲಾಗುತ್ತದೆ. ಈ ಮೂಲಕ ಐಪಿಎಲ್ ತಂಡಗಳ ಸಂಖ್ಯೆ 2022ಕ್ಕೆ 8 ರಿಂದ 10ಕ್ಕೆ ಏರಿಕೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


