ಟಿ-20 ವಿಶ್ವಕಪ್: ದಕ್ಷಿಣ ಆಫ್ರಿಕಾ ತಂಡದಿಂದ ನಾಲ್ಕನೇ ಬಾರಿ ಕಡಿಮೆ ಸ್ಕೋರ್
ಟಿ 20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ನಾಲ್ಕನೇ ಬಾರಿಗೆ ಕಡಿಮೆ ಸ್ಕೋರ್ ದಾಖಲಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 9 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತು.

ದುಬೈ: ಟಿ 20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ನಾಲ್ಕನೇ ಬಾರಿಗೆ ಕಡಿಮೆ ಸ್ಕೋರ್ ದಾಖಲಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 9 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತು. ಅವರು ಈ ಹಿಂದೆ 2007ರ ಟಿ -20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ 116, 2009 ರ ಟಿ -20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 122 ಹಾಗೂ 2009 ರ ಟಿ - 20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 128 ರನ್ ಗಳಿಸಿತ್ತು.
ಇದನ್ನೂ ಓದಿ: ಟಿ20 ವಿಶ್ವಕಪ್: ಸೂಪರ್ 12ರ ಘಟ್ಟಕ್ಕೆ ಅರ್ಹತೆ ಪಡೆದ ತಂಡಗಳು; ಟೂರ್ನಿಯ ವೇಳಾಪಟ್ಟಿ; ನಾಳೆ ಇಂಡೋ-ಪಾಕ್ ಪಂದ್ಯ!
ಇನ್ನೂ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಗೆ 118 ರನ್ ಗಳಿಸಿತು. ಆಸೀಸ್ ಬೌಲರ್‌ಗಳ ದಾಳಿಗೆ ಮಕ್ರಮ್ (40) ಹೊರತು ಪಡಿಸಿ ಬೇರೆ ಯಾರೂ ಗಮನಾರ್ಹ ಪ್ರದರ್ಶನ ನೀಡಲಿಲ್ಲ. ದಕ್ಷಿಣ ಆಫ್ರಿಕಾದ ಐವರು ಬ್ಯಾಟ್ಸ್‌ಮನ್‌ಗಳು ಸಿಂಗಲ್ ಡಿಜಿಟ್ ಗೆ ಸೀಮಿತಗೊಂಡಿದ್ದರು.
ಆಸೀಸ್ ಬೌಲರ್‌ಗಳಲ್ಲಿ ಹ್ಯಾಜಲ್‌ವುಡ್, ಆಡಮ್ ಜಂಪಾ, ಮಿಚೆಲ್ ಸ್ಟಾರ್ಕ್ ತಲಾ ಎರಡು ವಿಕೆಟ್ ಪಡೆದರು. ಮ್ಯಾಕ್ಸ್‌ವೆಲ್, ಕಮಿನ್ಸ್ ತಲಾ ನಾಲ್ಕು ವಿಕೆಟ್ ಪಡೆದರು. ನಂತರ ಬ್ಯಾಟಿಂಗ್ ಮಾಡಿದ ಆಸೀಸ್ ತಂಡ ಐದು ವಿಕೆಟ್ ಅಂತರದ ರೋಚಕ ಜಯ ಸಾಧಿಸಿದೆ.
Related Article
ಟಿ20 ವಿಶ್ವಕಪ್: ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ತಂಡ ಪ್ರಕಟ
ಹೊಸ ಐಪಿಎಲ್ ತಂಡಕ್ಕೆ ರಣವೀರ್, ದೀಪಿಕಾ ಜೋಡಿ ಬಿಡ್!
ಐಸಿಸಿ ಟಿ-20 ವಿಶ್ವಕಪ್: ಎರಡು ಫೇವರಿಟ್ ತಂಡಗಳನ್ನು ಆಯ್ಕೆ ಮಾಡಿದ ಶೇನ್ ವಾರ್ನ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


