T20 WC: ಟೀಂ ಇಂಡಿಯಾ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಮತ್ತೊಂದು ಶಾಕ್! ಲಾಕಿ ಫರ್ಗುಸನ್ ಔಟ್
ನ್ಯೂಜಿಲೆಂಡ್ ಕ್ರಿಕೆಟ್ ತಂಡ ಶಾಕ್ ಮೇಲೆ ಶಾಕ್ ಗೆ ಗುರಿಯಾಗುತ್ತಿದೆ. ಮಂಗಳವಾರ ಪಾಕಿಸ್ತಾನ ವಿರುದ್ಧ ಸೋಲಿನ ನಂತರ ಈಗ ಮತ್ತೊಂದು ಸುದ್ದಿ ಕಿವೀಸ್ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ದುಬೈ: ನ್ಯೂಜಿಲೆಂಡ್ ಕ್ರಿಕೆಟ್ ತಂಡ ಶಾಕ್ ಮೇಲೆ ಶಾಕ್ ಗೆ ಗುರಿಯಾಗುತ್ತಿದೆ. ಮಂಗಳವಾರ ಪಾಕಿಸ್ತಾನ ವಿರುದ್ಧ ಸೋಲಿನ ನಂತರ ಈಗ ಮತ್ತೊಂದು ಸುದ್ದಿ ಕಿವೀಸ್ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ನ್ಯೂಜಿಲೆಂಡ್ ತಂಡದ ಪರ ವೇಗದ ಬೌಲರ್ ಆಗಿದ್ದ ಲಾಕಿ ಫರ್ಗುಸನ್ ಗಾಯದಿಂದಾಗಿ ಟಿ-20 ವಿಶ್ವಕಪ್ ಟೂರ್ನಿಯಿಂದಲೇ ಹೊರಗುಳಿಯುವ ಸಾಧ್ಯತೆ ಇದೆ.
ಫರ್ಗುಸನ್ ನಿರ್ಗಮನದ ನಂತರ ಮುಂಬೈ ಇಂಡಿಯನ್ಸ್ ಪರ ಆಡಿರುವ ಆಡಮ್ ಮಿಲ್ನೆ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅನುಮೋದಿಸುವವರೆಗೂ ಬದಲಿ ಆಟಗಾರ ಅಲಭ್ಯರಾಗಿರುತ್ತಾರೆ.
ಭಾರತದ ವಿರುದ್ಧ ಅಕ್ಟೋಬರ್ 31ರಂದು ನ್ಯೂಜಿಲೆಂಡ್ ಪಂದ್ಯ ಆಡಬೇಕಿದೆ. ಸೆಮಿಫೈನಲ್ ಗೆ ಹೋಗಬೇಕಾದರೆ ಇಂಡಿಯಾ ಹಾಗೂ ಕಿವೀಸ್ ತಂಡಗಳ ಪಾಲಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಆದರೆ, ವೇಗದ ಬೌಲರ್ ಲಾಕಿ ಫರ್ಗುಸನ್ ಟೂರ್ನಿಯಿಂದಲೇ ಹೊರಹೋಗಿರುವ ವಿಚಾರ ನ್ಯೂಜಿಲೆಂಡ್ ತಂಡಕ್ಕೆ ಹಿನ್ನಡೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


