ಟಿ20 ವಿಶ್ವಕಪ್: ನಮೀಬಿಯಾ ವಿರುದ್ಧ ಆಫ್ಘಾನಿಸ್ತಾನಕ್ಕೆ 62ರನ್ ಗಳ ಭರ್ಜರಿ ಜಯ
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ನಮೀಬಿಯಾ ವಿರುದ್ಧ 62 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ನಮೀಬಿಯಾ ವಿರುದ್ಧ 62 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಭಾನುವಾರ ನಡೆದ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಅಫ್ಗಾನಿಸ್ತಾನ 62 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ವಿದಾಯದ ಪಂದ್ಯ ಆಡಿದ ಮಾಜಿ ನಾಯಕ ಅಸ್ಗರ್ ಅಫ್ಗನ್‌ಗೆ ವಿಜಯದ ಬೀಳ್ಕೊಡುಗೆಯನ್ನು ಸಲ್ಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 160ರನ್ ಗಳಿಸಿತು. ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ನಮೀಬಿಯಾ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 98ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 62 ರನ್ ಗಳ ಅಂತರದಲ್ಲಿ ಭರ್ಜರಿ ಸಾಧಿಸಿದೆ.
ಇದರೊಂದಿಗೆ ಆಫ್ಘಾನಿಸ್ತಾನ ತಾನಾಡಿದ ಮೂರು ಪಂದ್ಯಗಳಲ್ಲಿ ಎರಡನೇ ಗೆಲುವಿನೊಂದಿಗೆ ನಾಲ್ಕು ಅಂಕ ಸಂಪಾದಿಸಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಅತ್ತ ಸ್ಕಾಟ್ಲೆಂಡ್ ವಿರುದ್ಧ ಗೆಲುವಿನ ಶುಭಾರಂಭ ಮಾಡಿದ್ದ ನಮೀಬಿಯಾ ಸೂಪರ್-12 ಹಂತದಲ್ಲಿ ಮೊದಲ ಸೋಲಿಗೆ ಶರಣಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


