ಟಿ20 ವಿಶ್ವಕಪ್: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆ, ಟೀಂ ಇಂಡಿಯಾ 2 ಬದಲಾವಣೆ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಎದುರಾಗಿದ್ದು, ಟಾಸ್ ಗೆದ್ದ ಕಿವೀಸ್ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ದುಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಎದುರಾಗಿದ್ದು, ಟಾಸ್ ಗೆದ್ದ ಕಿವೀಸ್ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಆರಂಭಗೊಂಡಿರುವ ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ಮುಂದಿನ ಹಂತಕ್ಕೇರಲು ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
ಟೀಂ ಇಂಡಿಯಾದಲ್ಲಿ 2 ಬದಲಾವಣೆ
ಇನ್ನು ಟೀಂ ಇಂಡಿಯಾದಲ್ಲಿ 2 ಬದಲಾವಣೆಯಾಗಿದ್ದು, ಕೆಳ ಬೆನ್ನು ನೋವಿನಿಂದ ಬಳಲುತ್ತಿರುವ ಸೂರ್ಯಕುಮಾರ್ ಯಾದವ್ ಬದಲಿಗೆ ಇಶಾನ್ ಕಿಶನ್ ಆಡುತ್ತಿದ್ದು, ಇತ್ತ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.
ತಂಡಗಳು ಇಂತಿದೆ.
ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ(ನಾಯಕ), ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ನ್ಯೂಜಿಲೆಂಡ್ (ಪ್ಲೇಯಿಂಗ್ XI): ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಜೇಮ್ಸ್ ನೀಶಮ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


