ದ್ರಾವಿಡ್ ದಾಖಲೆ ಮುರಿದ ರೋಹಿತ್ ಶರ್ಮಾ!
ಟೆಸ್ಟ್ ವಿಭಾಗದಲ್ಲಿ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಟೆಸ್ಟ್ ವಿಭಾಗದಲ್ಲಿ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಭಾರತೀಯ ಕ್ರಿಕೆಟಿಗರೊಬ್ಬರು ಇಂಗ್ಲೆಂಡ್ ನಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸಿದ ದಾಖಲೆ ಈ ವರೆಗೂ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿತ್ತು. ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ನ ಸೆ.04 ರ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಗಳಿಸುವ ಮೂಲಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಕೆನ್ನಿಂಗ್ ಟನ್ ಓವಲ್ ನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ದಾಖಲಿಸುವ ಮೂಲಕ ಇಂಗ್ಲೆಂಡ್ ನಲ್ಲಿ 9 ನೇ ಶತಕ ದಾಖಲಿಸಿದರು. ರಾಹುಲ್ ದ್ರಾವಿಡ್ ಇಂಗ್ಲೆಂಡ್ ನಲ್ಲಿ 8 ಶತಕ ದಾಖಲಿಸಿದ್ದರು.
ಅಚ್ಚರಿಯೆಂದರೆ ರೋಹಿತ್ ಶರ್ಮಾ ಅವರ 9 ಶತಕಗಳ ಪೈಕಿ 8 ಶತಕಗಳು 2018 ರ ಪ್ರಾರಂಭದಿಂದ ದಾಖಲಾಗಿದ್ದವು ಲೆಜೆಂಡರಿ ಬ್ಯಾಟ್ಸ್ ಮನ್ ಡೊನಾಲ್ಡ್ ಬ್ರಾಡ್ ಮ್ಯಾನ್ ಇಂಗ್ಲೆಂಡ್ ನಲ್ಲಿ ಅತಿ ಹೆಚ್ಚು ಶತಕ (11 ಶತಕ) ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


