5ನೇ ಟೆಸ್ಟ್ ರದ್ದು: ಐಸಿಸಿಗೆ ಪತ್ರ ಬರೆದ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ
ರದ್ದಾದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಿರ್ಧರಿಸುವಂತೆ ಕೋರಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ(ಐಸಿಸಿ) ಅಧಿಕೃತವಾಗಿ ಪತ್ರ ಬರೆದಿದೆ.

ಲಂಡನ್: ರದ್ದಾದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಿರ್ಧರಿಸುವಂತೆ ಕೋರಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ(ಐಸಿಸಿ) ಅಧಿಕೃತವಾಗಿ ಪತ್ರ ಬರೆದಿದೆ.
"ಹೌದು ನಾವು ಐಸಿಸಿಗೆ ಪತ್ರ ಬರೆದಿದ್ದೇವೆ" ಎಂದು ಇಸಿಬಿ ವಕ್ತಾರರು ಐದನೇ ಟೆಸ್ಟ್ ಬಗ್ಗೆ ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ನಿರ್ಧರಿಸಬೇಕು ಎಂದು ಬಯಸುತ್ತೀರಾ ಎಂದು ಪಿಟಿಐ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮ್ಯಾಂಚೆಸ್ಟರ್ನಲ್ಲಿ ಕೊನೆಯ ಟೆಸ್ಟ್ ಅನ್ನು ಶುಕ್ರವಾರ ಆರಂಭಕ್ಕೆ ಮೂರು ಗಂಟೆಗಳ ಮೊದಲು ಭಾರತೀಯ ಶಿಬಿರದಲ್ಲಿ ಕೊರೋನಾ ಭಯದಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಈ ಹಿಂದೆ, ಭಾರತ ತಂಡದ ಎರಡನೇ ಫಿಸಿಯೋ ಯೋಗೀಶ್ ಪರ್ಮಾರ್ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿತ್ತು. ಆದರೆ ಭಾರತೀಯ ಆಟಗಾರರ ಆರ್ಟಿ–ಪಿಸಿಆರ್ ವರದಿ ನೆಗೆಟಿವ್ ಬಂದರೂ ಕೋವಿಡ್ ಆತಂಕದಿಂದಾಗಿ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಅಂತಿಮ ಪಂದ್ಯವನ್ನು ಭಾರತ ಬಿಟ್ಟುಕೊಟ್ಟಿದೆ ಎಂದು ಐಸಿಸಿ ತೀರ್ಪು ಕಲ್ಪಿಸಿದ್ದಲ್ಲಿ ಸರಣಿ 2-2ರಲ್ಲಿ ಸಮಬಲವಾಗಲಿದೆ. ಅಲ್ಲದೆ ಅಂತಹ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ಗೆ ಪಂದ್ಯದ ನಷ್ಟವನ್ನು 'ಕ್ಲೈಮ್' ಮಾಡುವ ಅವಕಾಶವಿರುತ್ತದೆ. ಅಂದರೆ ಬಿಸಿಸಿಐ ನಷ್ಟ ಭರಿಸಬೇಕಾಗುತ್ತದೆ.
ವರದಿಯ ಪ್ರಕಾರ ಇಸಿಬಿಗೆ ಸರಿ ಸುಮಾರು 40 ಮಿಲಿಯನ್ ಪೌಂಡ್ಗಳಷ್ಟು ನಷ್ಟ ಉಂಟಾಗಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಬಿಕ್ಕಟನ್ನು ಪರಿಹರಿಸಲು ಐಸಿಸಿಯ ವಿವಾದ ಇತ್ಯರ್ಥ ಸಮಿತಿಗೆ ಇಸಿಬಿಯು ಪತ್ರ ಬರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


