ಕಳಪೆ ದಾಖಲೆ ಬರೆದ ಮುಂಬೈ ಇಂಡಿಯನ್ಸ್: 12 ಪಂದ್ಯಗಳಲ್ಲಿ ಚೇಸಿಂಗ್ ನಲ್ಲಿ ಮೊದಲ ಸೋಲು
ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಇಂದು ನಡೆದ ಪಂದ್ಯದಲ್ಲಿ 20 ರನ್ ಗಳ ಅಂತರದಲ್ಲಿ ಸೋತ ಮುಂಬೈ ಇಂಡಿಯನ್ಸ್ ತಂಡ ಹೀನಾಯ ದಾಖಲೆ ಬರೆದಿದೆ.

ದುಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಇಂದು ನಡೆದ ಪಂದ್ಯದಲ್ಲಿ 20 ರನ್ ಗಳ ಅಂತರದಲ್ಲಿ ಸೋತ ಮುಂಬೈ ಇಂಡಿಯನ್ಸ್ ತಂಡ ಹೀನಾಯ ದಾಖಲೆ ಬರೆದಿದೆ.
ಹಾಲಿ ಟೂರ್ನಿಯಲ್ಲಿ ಚೇಸಿಂಗ್ ಮಾಡಿದ ಕಳೆದ 12 ಪಂದ್ಯಗಳಲ್ಲಿ ಮೊದಲ ಬಾರಿಗೆ ಸೋಲು ಕಂಡಿದೆ. ಇಂದಿನ ಪಂದ್ಯವೂ ಸೇರಿದಂತೆ ಕಳೆದ 12 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿ, ಒಂದರಲ್ಲಿ ಸೋತು, ಒಂದು ಪಂದ್ಯ ಟೈ ಆಗಿದೆ.
ಮುಂಬೈ ಇಂಡಿಯನ್ಸ್ ತಂಡ ಕೊನೆಯ ಬಾರಿಗೆ ಚೇಸಿಂಗ್ ನಲ್ಲಿ ಸೋತಿದ್ದು, 2019ರ ಏಪ್ರಿಲ್ ನಲ್ಲಿ... ಅಂದು ಕೋಲ್ಕತಾ ನೀಡಿದ್ದ 233 ರನ್ ಗಳ ಬೃಹತ್ ರನ್ ಗಳ ಚೇಸಿಂಗ್ ಪಂದ್ಯದಲ್ಲಿ ಸೋತಿತ್ತು.
ಇಂದು ನಡೆದ ಪಂದ್ಯದಲ್ಲಿ ಚೆನ್ನೈ ನೀಡಿದ 157 ರನ್ ಗಳ ಸಾಧಾರಣ ಗುರಿಯನ್ನು ಬೆನ್ನುಹತ್ತಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 20 ರನ್ ಗಳ ಅಂತರದಲ್ಲಿ ಚೆನ್ನೈ ಎದುರು ಮಂಡಿಯೂರಿತು. ಮುಂಬೈ ಪರ ಸೌರಭ್ ತಿವಾರಿ ಅರ್ಧಶತಕ ಗಳಿಸಿದ್ದು ಬಿಟ್ಟರೆ ಉಳಿದಾವ ಆಟಗಾರರಿಂದಲೂ ಉತ್ತಮ ಪ್ರದರ್ಶನ ಮೂಡಿಬರಲಿಲ್ಲ.
ಇತ್ತ ಚೆನ್ನೈ ಪರ ಡ್ವೇಯ್ನ್ ಬ್ರಾವೋ 3 ವಿಕೆಟ್ ಕಬಳಿಸಿದರೆ, ದೀಪಕ್ ಚಹರ್ 2 ಮತ್ತು ಜೋಷ್ ಹೇಜಲ್ ವುಡ್ ಮತ್ತು ಶಾರ್ದೂಲ್ ಠಾಕೂರ್ ತಲಾ 1 ವಿಕೆಟ್ ಕಬಳಿಸಿದರು. ಅಂತೆಯೇ ಚೆನ್ನೈ ಪರ ರನ್ ಗಳಿಸಿ ಉತ್ತಮ ಪ್ರದರ್ಶನ ನೀಡಿದ ರಿತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


