ಕ್ರಿಕೆಟ್

ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ

ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ ಸಾಧಿಸಿದೆ.

ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ
ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ
Published On :

ದುಬೈ: ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿ ರಾಜಸ್ಥಾನ ನೀಡಿದ 186 ರನ್​ಗಳ ಕಠಿಣ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 183 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಕೇವಲ 2 ರನ್ ಗಳ ಅಂತರದಲ್ಲಿ ವಿರೋಚಿತ ಸೋಲು ಕಂಡಿತು.

ಪಂಜಾಬ್ ಪರ ನಾಯಕ ಕೆಎಲ್ ರಾಹುಲ್ (49 ರನ್), ಮಯಾಂಕ್ ಅಗರ್ವಾಲ್ (67 ರನ್), ನಿಕೋಲಸ್ ಪೂರನ್ (32 ರನ್) ಪಂಜಾಬ್ ಗೆಲುವಿಗಾಗಿ ಹರಸಾಹಸ ಪಟ್ಟರು. ಆದರೆ ಅಂತಿಮ ಹಂತದಲ್ಲಿ ದೀಪಕ್ ಹೂಡ ಶೂನ್ಯಕ್ಕೆ ಔಟ್ ಆಗಿದ್ದು ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತು. ಪಂಜಾಬ್ ಕೇವಲ 2 ರನ್ ಗಳ ವಿರೋಚಿತ ಸೋಲು ಕಂಡಿತು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.