ಐಪಿಎಲ್-2021: ಪಂಜಾಬ್ ಗೆ ಬೃಹತ್ ಗುರಿ ನೀಡಿದ ರಾಜಸ್ಥಾನ ರಾಯಲ್ಸ್
ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಬೃಹತ್ ಮೊತ್ತ ಪೇರಿಸಿದೆ.

ದುಬೈ: ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಬೃಹತ್ ಮೊತ್ತ ಪೇರಿಸಿದೆ.
ಮಹಿಪಾಲ್ ಲೋಮ್ರೋರ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ಗೆ 186 ರನ್ಗಳ ಕಠಿಣ ಗುರಿ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡ 185 ರನ್ಗಳಿಗೆ ಆಲೌಟ್ ಆಯಿತು.
ಇಂದೇ ರಾಯಲ್ಸ್ ಪರ ಪದಾರ್ಪಣೆ ಮಾಡಿದ ಎವಿನ್ ಲೂಯಿಸ್ ಯುವ ಆಟಗಾರ ಜೈಸ್ವಾಲ್ ಜೊತೆಗೂಡಿ ಮೊದಲ ವಿಕೆಟ್ಗೆ 54 ರನ್ ಸೇರಿಸಿ ಭರ್ಜರಿ ಆರಂಭ ಕೊಟ್ಟರು. ಕೇವಲ 21 ಎಸೆತಗಳಲ್ಲಿ 7 ಬೌಂಡರಿ ಮತ್ತು ಒಂದು ಸಿಕ್ಸರ್ ಸಹಿತ 36 ರನ್ಗಳಿಸಿ ಅರ್ಶದೀಪ್ ಸಿಂಗ್ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ನಾಯಕ ಸ್ಯಾಮ್ಸನ್ ಕೇವಲ 4 ರನ್ಗಳಿಸಿ ಪದಾರ್ಪಣೆ ಬೌಲರ್ ಇಶಾನ್ ಪೊರೆಲ್ಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು.
3ನೇ ವಿಕೆಟ್ಗೆ ಜೈಸ್ವಾಲ್ ಜೊತೆಗೂಡಿದ ಲಿವಿಂಗ್ಸ್ಟೋನ್(25)48 ರನ್ ಸೇರಿಸಿ ಅರ್ಶದೀಪ್ಗೆ 2ನೇ ಬಲಿಯಾದರು. ಇವರ ಬೆನ್ನಲ್ಲೇ 36 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 6 ಬೌಂಡರಿ ಸಹಿತ 49 ರನ್ಗಳಿಸಿದ್ದ ಜೈಸ್ವಾಲ್ ಹರ್ಪ್ರೀತ್ ಬ್ರಾರ್ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಶೆಯನುಭವಿಸಿದರು.
ಪಂಜಾಬ್ ಕಿಂಗ್ಸ್ ಪರ ಯುವ ಬೌಲರ್ ಅರ್ಶ್ದೀಪ್ ಸಿಂಗ್ 32 ರನ್ ನೀಡಿ 5 ವಿಕೆಟ್ ಪಡೆದರೆ, ಅನುಭವಿ ಶಮಿ 21 ರನ್ ನೀಡಿ 3 ವಿಕೆಟ್ ಪಡೆದರು. ಬ್ರಾರ್ ಮತ್ತು ಪೊರೆಲ್ ತಲಾ ಒಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್ ವಿವರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


