ಐಪಿಎಲ್-2021: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ
ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಅಬುದಾಬಿ: ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡ ನೀಡಿಗ 135 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಶಿಖರ್ ಧವನ್ (42 ರನ್) ಮತ್ತು ಶ್ರೇಯಸ್ ಅಯ್ಯರ್ (ಅಜೇಯ 47) ಅಮೋಘ ಬ್ಯಾಟಿಂಗ್ ನೆರವಿಂದಾಗಿ 17.5 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಪೃಥ್ವಿಶಾ 11 ರನ್ ಗಳಿಸಿ ಖಲೀಲ್ ಅಹ್ಮದ್ ಗೆ ವಿಕೆಟ್ ಒಪ್ಪಿಸಿದರೆ, ನಾಯಕ ಶಿಖರ್ ಧವನ್ 42 ರನ್ ಗಳಿಸಿ ರಶೀದ್ ಖಾನ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಗೂಡಿದ ಶ್ರೇಯಸ್ ಅಯ್ಯರ್ (ಅಜೇಯ 47) ಮತ್ತು ರಿಷಬ್ ಪಂತ್ (ಅಜೇಯ 35 ರನ್) ಇನ್ನೂ 13 ಎಸೆತಗಳು ಇರುವಂತೆಯೇ ಗೆಲುವಿನ ಔಪಚಾರಿಕತೆ ಮುಗಿಸಿದರು.
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 134 ರನ್ ಗಳನ್ನು ಸಾಧಿಸಿತು. ದೆಹಲಿಯ ರಬಾಡಾ ಬೌಲಿಂಗ್ ದಾಳಿಗೆ ತತ್ತರಿಸಿದ ಕೇವಲ 134 ರನ್ ಗಳಿಸಿತು. ಅಬ್ದುಲ್ ಸಮಾದ್ ಗಳಿಸಿದ 28 ರನ್ ರನ್ ಗಳು ವೈಯುಕ್ತಿಕ ಗರಿಷ್ಠ ಮೊತ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


