ಐಪಿಎಲ್ ಗೆ ಕೊರೋನಾ ಕಾಟ: ಹೈದರಾಬಾದ್ ತಂಡದ ಆಟಗಾರನಿಗೆ ಕೋವಿಡ್ ಸೋಂಕು ದೃಢ!
ಕೊರೋನಾ ಎರಡನೇ ಅಲೆಯಿಂದಾಗಿ ಭಾರತದಲ್ಲಿ ನಡೆಯುತ್ತಿದ್ದ ಐಪಿಎಲ್ ಟೂರ್ನಿಯನ್ನು ತಾತ್ಕಾಲಿಕವಾಗಿ ರದ್ದುಪಡಿಸಿ ಇದೀಗ ದುಬೈನಲ್ಲಿ ನಡೆಸಲಾಗುತ್ತದೆ. ಆದರೆ ದುಬೈನಲ್ಲೂ ಐಪಿಎಲ್ ಗೆ ಕೊರೋನಾ ಕಾಟ ಶುರುವಾಗಿದೆ.

ದುಬೈ: ಕೊರೋನಾ ಎರಡನೇ ಅಲೆಯಿಂದಾಗಿ ಭಾರತದಲ್ಲಿ ನಡೆಯುತ್ತಿದ್ದ ಐಪಿಎಲ್ ಟೂರ್ನಿಯನ್ನು ತಾತ್ಕಾಲಿಕವಾಗಿ ರದ್ದುಪಡಿಸಿ ಇದೀಗ ದುಬೈನಲ್ಲಿ ನಡೆಸಲಾಗುತ್ತದೆ. ಆದರೆ ದುಬೈನಲ್ಲೂ ಐಪಿಎಲ್ ಗೆ ಕೊರೋನಾ ಕಾಟ ಶುರುವಾಗಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ನಟರಾಜನ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಅವರ ಸಂಪರ್ಕಕ್ಕೆ ಬಂದ ಇತರ ಆರು ಆಟಗಾರರ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಇಂದು ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಧ್ಯೆ ಪಂದ್ಯ ನಡೆಯಬೇಕಿತ್ತು. ಆದರೆ ನಟರಾಜನ್ ಗೆ ಕೊರೋನಾ ಪಾಸಿಟಿವ್ ಬಂದಿರುವುದರಿಂದ ಪಂದ್ಯ ನಡೆಯುವುದು ಅನುಮಾನವಾಗಿದೆ. ಇನ್ನು ಹೈದರಾಬಾದ್ ಆಟಗಾರರು ಮತ್ತು ಸಿಬ್ಬಂದಿಯ ಆರ್ ಟಿಪಿಸಿಆರ್ ವರದಿ ಬಂದ ನಂತರ ಪಂದ್ಯ ನಡೆಯಬೇಕಾ ಅಥವಾ ಮುಂದೂಡುವ ಬಗ್ಗೆ ಸ್ಪಷ್ಟನೆ ಸಿಗಲಿದೆ.
ಸದ್ಯ ನಟರಾಜನ್ ಸಂಪರ್ಕಕ್ಕೆ ಬಂದಿದ್ದ ಆಟಗಾರ ವಿಜಯ್ ಶಂಕರ್, ತಂಡದ ಮ್ಯಾನೇಜರ್ ವಿಜಯ್ ಕುಮಾರ್, ಫಿಸಿಯೋಥೆರಪಿಸ್ಟ್ ಶ್ಯಾಮ್ ಸುಂದರ್, ತಂಡದ ವೈದ್ಯೆ ಅಂಜನಾ ವನ್ನನ್, ಲಾಜಿಸ್ಟಿಕ್ಸ್ ಮ್ಯಾನೇಜರ್ ತುಷಾರ್ ಖೇಡ್ಕರ್ ಮತ್ತು ನೆಟ್ ಬೌಲರ್ ಪೆರಿಯಸಾಮಿ ಗಣೇಶನ್ ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


