ಕ್ರಿಕೆಟ್

ಐಪಿಎಲ್-2021: ಆರ್ ಸಿಬಿ ವಿರುದ್ಧ ಚೆನ್ನೈಗೆ 6 ವಿಕೆಟ್ ಗಳ ಭರ್ಜರಿ ಜಯ

ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಐಪಿಎಲ್-2021: ಆರ್ ಸಿಬಿ ವಿರುದ್ಧ ಚೆನ್ನೈಗೆ 6 ವಿಕೆಟ್ ಗಳ ಭರ್ಜರಿ ಜಯ
ಚೆನ್ನೈಗೆ ಗೆಲುವು
Published On :

ಶಾರ್ಜಾ: ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಕೊಹ್ಲಿ ನೇತೃತ್ವದ ಆರ್ ಸಿಬಿ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತ್ತು. ಆರ್ ಸಿಬಿ ನೀಡಿದ 157 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಎಂಎಸ್ ಧೋನಿ ನೇತೃತ್ವದ ಚೆನ್ನೈ ತಂಡ 18.1 ಓವರ್ ನಲ್ಲಿ ಅಂದರೆ ಇನ್ನೂ 11 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು 157ರನ್ ಗಳಿಸಿ ಜಯಭೇರಿ ಬಾರಿಸಿತು. 

ಚೆನ್ನೈ ಪರ ರುತುರಾಜ್ ಗಾಯಕ್ವಾಡ್ 38ರನ್, ಡುಪ್ಲೆಸಿಸ್ 31ರನ್, ಮೊಯಿನ್ ಅಲಿ 23 ರನ್ ಮತ್ತು ಅಂಬಾಟಿ ರಾಯುಡು 32 ರನ್ ಗಳಿಸಿ ಗೆಲುವಿನಲ್ಲಿ ಪಾತ್ರ ವಹಿಸಿದರು. ಅಂತಿಮವಾಗಿ ಸುರೇಶ್ ರೈನಾ (ಅಜೇಯ 17) ಮತ್ತು ನಾಯಕ ಎಂಎಸ್ ಧೋನಿ (ಅಜೇಯ 11 ರನ್) ಗೆಲುವಿನ ಔಪಚಾರಿಕತೆ ಮುಗಿಸಿದರು.

ಆರ್ ಸಿಬಿ ಪರ ಹರ್ಷಲ್ ಪಟೇಲ್ 2, ಚಹಲ್ ಮತ್ತು ಮ್ಯಾಕ್ಸ್ ವೆಲ್ ತಲಾ 1 ವಿಕೆಟ್ ಪಡೆದರು. 

ಅಂತೆಯೇ ಚೆನ್ನೈ ಪರ 3 ವಿಕೆಟ್ ಪಡೆದು ಬೆಂಗಳೂರು ತಂಡವನ್ನು 156ರನ್ ಗಳಿಗೆ ನಿಯಂತ್ರಿಸುವಲ್ಲಿ ಮಹತ್ತರ ಪಾತ್ರವಹಿಸಿಗ ಡ್ವೇಯ್ನ್ ಬ್ರಾವೋ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.