ಕ್ರಿಕೆಟ್

ಐಪಿಎಲ್: ದೆಹಲಿ ವಿರುದ್ಧ ಕೆಕೆಆರ್ ಗೆ 3 ವಿಕೆಟ್​ಗಳ ರೋಚಕ ಗೆಲುವು

ಸಂಘಟಿತ ಬೌಲಿಂಗ್ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 14ನೇ ಆವೃತ್ತಿಯ 41ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮೂರು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.

ಐಪಿಎಲ್: ದೆಹಲಿ ವಿರುದ್ಧ ಕೆಕೆಆರ್ ಗೆ 3 ವಿಕೆಟ್​ಗಳ ರೋಚಕ ಗೆಲುವು
ನಿತೀಶ್ ರಾಣಾ
Published On :

ಶಾರ್ಜಾ: ಸಂಘಟಿತ ಬೌಲಿಂಗ್ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 14ನೇ ಆವೃತ್ತಿಯ 41ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮೂರು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ದೆಹಲಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 127 ರನ್ ಸೇರಿಸಿತು. ಗೆಲುವಿಗೆ 128 ರನ್ ಗಳ ಕಡಿಮೆ ಮೊತ್ತದ ಗುರಿ ಬೆನ್ನತ್ತಿದ ಕೋಲ್ಕತಾ ನೈಟ್ ರೈಡರ್ಸ್ 3 ವಿಕೆಟ್​ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ಪ್ಲೇ ಆಫ್ ಆಸೆಯನ್ನ ಜೀವಂತವಾಗಿರಿಸಿಕೊಂಡಿದೆ.

ಸುನೀಲ್ ನರೈನ್, ಲಾಕೀ ಫರ್ಗೂಸನ್ ಮತ್ತು ವೆಂಕಟೇಶ್ ಅಯ್ಯರ್ ಅಮೋಘ ಬೌಲಿಂಗ್ ಪ್ರದರ್ಶನ ತೋರಿ ದೆಹಲಿ ಕ್ಯಾಪಿಟಲ್ಸ್ ಅನ್ನು 127 ರನ್​ಗೆ ಸೀಮಿತಗೊಳಿಸಿದರು. ನಂತರ ಕೆಕೆಆರ್ ಚೇಸಿಂಗ್ ನಿರೀಕ್ಷಿತ ಹಾದಿಯಲ್ಲಿ ಸಾಗಲಿಲ್ಲ. ಪದೇ ಪದೇ ವಿಕೆಟ್ ಬಿದ್ದು ಪಂದ್ಯ ಎತ್ತ ಬೇಕಾದರೂ ವಾಲುವ ಸಾಧ್ಯತೆ ಇತ್ತು. ನಿತೀಶ್ ರಾಣಾ, ದಿನೇಶ್ ಕಾರ್ತಿಕ್, ಸುನೀಲ್ ನರೈನ್ ಅವರು ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿ ಕೆಕೆಆರ್ ತಂಡವನ್ನು ಅಪಾಯದಿಂದ ಪಾರು ಮಾಡಿದ್ದಲ್ಲದೇ ಅಮೂಲ್ಯವೆನಿಸುವ ಗೆಲುವಿಗೆ ಕಾರಣರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.