ಏಕದಿನ ತಂಡದ ನಾಯಕತ್ವದಿಂದ ಕೊಹ್ಲಿಗೆ ಕೊಕ್: ಟೀಂ ಇಂಡಿಯಾ ನಾಯಕರಾಗಿ ರೋಹಿತ್ ಶರ್ಮಾ: ಬಿಸಿಸಿಐ
ಟೀಂ ಇಂಡಿಯಾ ಏಕ ದಿನ ಪಂದ್ಯಗಳ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಗೆ ಹಸ್ತಾಂತರಿಸಲು ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿ ನಿರ್ಧರಿಸಿದೆ. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಿದೆ.

ಮುಂಬೈ: ಟೀಂ ಇಂಡಿಯಾ ಏಕ ದಿನ ಪಂದ್ಯಗಳ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಗೆ ಹಸ್ತಾಂತರಿಸಲು ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿ ನಿರ್ಧರಿಸಿದೆ. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಿದೆ.
ಇದರೊಂದಿಗೆ ಸದ್ಯ ಟಿ- 20ಗೆ ಮಾತ್ರ ನಾಯಕರಾಗಿದ್ದ ರೋಹಿತ್, ಸೀಮಿತ ಓವರ್‌ಗಳ ಪಂದ್ಯಗಳಿಗೂ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ. ಸದ್ಯ ಏಕದಿನ, ಟೆಸ್ಟ್ ನಾಯಕರಾಗಿರುವ ವಿರಾಟ್ ಕೊಹ್ಲಿ ಇನ್ನೂ ಟೆಸ್ಟ್ ಪಂದ್ಯಗಳಿಗೆ ಮಾತ್ರ ಸೀಮಿತವಾಗಲಿದ್ದಾರೆ.
ರಾಷ್ಟ್ರೀಯ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರನ್ನು 2023ರ ಅಂತಾರಾಷ್ಟ್ರೀಯ ಏಕದಿನ ವಿಶ್ವಕಪ್‌ವರೆಗೆ ತಂಡದ ಏಕೈಕ ವೈಟ್‌ಬಾಲ್ ನಾಯಕನನ್ನಾಗಿ ಮಾಡಿದೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, ಅಜಿಂಕ್ಯ ರಹಾನೆ ಅವರನ್ನು ಟೆಸ್ಟ್ ಉಪನಾಯಕತ್ವದಿಂದ ತೆಗೆದುಹಾಕಲಾಗಿದೆ. ಆ ಸ್ಥಾನವನ್ನು ರೋಹಿತ್‌ಗೆ ನೀಡಲಾಯಿತು.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್ ಸರಣಿಗೆ 18 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇದರಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ, ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ಆರಂಭಿಕ ಆಟಗಾರ ಶುಭಮನ್ ಗಿಲ್ ಗಾಯಗಳಿಂದಾಗಿ ತಂಡದಿಂದ ದೂರ ಉಳಿದಿದ್ದಾರೆ. ಹನುಮ ವಿಹಾರಿ ತಂಡಕ್ಕೆ ಪುನರಾಗಮನ ಮಾಡಿದ್ದು, ಕಳಪೆ ಫಾರ್ಮ್ ನಡುವೆಯೂ ಇಶಾಂತ್ ಶರ್ಮಾ ತಮ್ಮ ಸ್ಥಾನವನ್ನು ಉಳಿದುಕೊಳ್ಳಲು ಸಮರ್ಥರಾಗಿದ್ದಾರೆ.
ಟೀಂ ಇಂಡಿಯಾ ಟೆಸ್ಟ್ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ವಿಸಿ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (wk), ವೃದ್ಧಿಮಾನ್ ಸಹಾ (WK), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ , ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಎಂಡಿ ಸಿರಾಜ್.
ಸ್ಟ್ಯಾಂಡ್‌ಬೈ ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜನ್ ನಾಗ್ವಾಸ್ವಾಲ್ಲಾ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


