ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಎರಡನೇ ಸ್ಥಾನಕ್ಕೇರಿದ ಆಶ್ವಿನ್, 11ನೇ ಸ್ಥಾನಕ್ಕೆ ಜಿಗಿದ ಅಗರ್ವಾಲ್
ಅಂತರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಐಸಿಸಿ) ಬುಧವಾರ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಮುಂಬೈನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ...

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಐಸಿಸಿ) ಬುಧವಾರ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು,
ಮುಂಬೈನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಮತ್ತು ಅನುಭವಿ ಆಟಗಾರ ಆರ್ ಅಶ್ವಿನ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಆರ್ ಅಶ್ವಿನ್ ಅವರು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಅಶ್ವಿನ್ ಅವರು ಈಗ 360 ಅಂಕಗಳನ್ನು ಹೊಂದಿದ್ದಾರೆ. ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಅಶ್ವಿನ್ ತಲಾ ಮೂರು ವಿಕೆಟ್ ಪಡೆದಿದ್ದರು.
ಮೊದಲ ಸ್ಥಾನದಲ್ಲಿ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಇದ್ದು, ಅಶ್ವಿನ್‌ಗಿಂತ 22 ಅಂಕಗಳಷ್ಟು ಮುಂದಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಆರ್ ಅಶ್ವಿನ್‌ಗಿಂತ 12 ಅಂಕಗಳಷ್ಟು ಹಿಂದಿದ್ದಾರೆ.
ಇನ್ನು ಗಾಯದ ಕಾರಣದಿಂದಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದ ರವೀಂದ್ರ ಜಡೇಜಾ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.
ಎರಡನೇ ಟೆಸ್ಟ್‌ನಲ್ಲಿ ಭರ್ಜರಿ ಶತಕ ಹಾಗೂ ಅರ್ಧ ಶತಕಗಳಿಸಿ ಮಿಂಚಿದ್ದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ 11ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


