2ನೇ ಏಕದಿನ ಪಂದ್ಯ: ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ, ಲಂಕಾ ತಂಡದಲ್ಲಿ ಒಂದು ಬದಲಾವಣೆ
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೊಲಂಬೋ: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಶ್ರೀಲಂಕಾ ರಾಜಧಾನಿ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಸೋತು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಹಿನ್ನಡೆ ಅನುಭವಿಸಿರುವ ಲಂಕಾ ಪಡೆಗೆ ಸರಣಿ ಜೀವಂತವಾಗಿಟ್ಟುಕೊಳ್ಳುವ ನಿಟ್ಟಿನಲ್ಲಿ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯವನ್ನು ಗೆದ್ದು ಸರಣಿ ಸಮಬಲ ಸಾಧಿಸಲು ಲಂಕಾ ತಂಡ ಉತ್ಸುಕವಾಗಿದೆ.
ಇನ್ನು ಲಂಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಉಡಾನಾ ಬದಲಿಗೆ ಕಸುನ್ ರಜಿತಾ ಅವರು ತಂಡ ಸೇರಿಕೊಂಡಿದ್ದಾರೆ.
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮೊದಲ ಏಕದಿನ ಪಂದ್ಯವನ್ನಾಡಿದ್ದ ತಂಡವನ್ನೇ 2ನೇ ಏಕದಿನ ಪಂದ್ಯಕ್ಕೂ ಮುಂದುವರೆಸಲಾಗಿದೆ. ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮೇಲುಗೈ ಸಾಧಿಸಿರುವ ಶಿಖರ್ ಧವನ್ ಪಡೆ ಉತ್ಸಾಹದಿಂದ ಕೂಡಿದ್ದು, 2ನೇ ಪಂದ್ಯವನ್ನೂ ಗೆದ್ದು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳಲು ತವಕಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


