ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ದಾಖಲೆ ಬರೆದ ಭಾರತ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಆಫ್ಧಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ದಾಖಲೆ ನಿರ್ಮಾಣ ಮಾಡಿದೆ.

ಅಬುದಾಬಿ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಆಫ್ಧಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ದಾಖಲೆ ನಿರ್ಮಾಣ ಮಾಡಿದೆ.
ಹೌದು.. ಇಂದು ಅಬುದಾಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಫ್ಗನ್ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬ್ಯಾಟ್ಸಮನ್ ಗಳು ನಿಗದಿತ 20 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ ಬರೊಬ್ಬರಿ 210 ರನ್ ಗಳನ್ನು ಕಲೆ ಹಾಕಿದರು. ಇದು ಭಾರತದ ಪರ ದಾಖಲೆಯಾಗಿದ್ದು, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ದಾಖಲಿಸಿದ 2ನೇ ಗರಿಷ್ಠ ಸ್ಕೋರ್ ಆಗಿದೆ.

ಈ ಹಿಂದೆ ಅಂದರೆ 2007ರಲ್ಲಿ ಡರ್ಬನ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ 218/4 ಗಳಿಸಿತ್ತು. ಇದು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಗಳಿಸಿದ ಗರಿಷ್ಠ ಮೊತ್ತವಾಗಿ ಉಳಿದಿದೆ. ನಂತರದ ಸ್ಥಾನದಲ್ಲಿ ಇಂದಿನ ಪಂದ್ಯವಿದ್ದು, ಇಲ್ಲಿ ಭಾರತ ಆಫ್ಘನ್ ವಿರುದ್ಧ 210/2 ರನ್ ಗಳಿಸಿದೆ.
2016ರಲ್ಲಿ ಮುಂಬೈ ನಲ್ಲಿ ವಿಂಡೀಸ್ ವಿರುದ್ಧದ ಪಂದ್ಯ 3ನೇ ಸ್ಥಾನದಲ್ಲಿದ್ದು, ಆ ಪಂದ್ಯದಲ್ಲಿ ಭಾರತ 192 ರನ್ ಕಲೆ ಹಾಕಿತ್ತು. ನಾಲ್ಕನೇ ಸ್ಥಾನದಲ್ಲಿ 2007ರಲ್ಲಿ ಡರ್ಬನ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯವಿದ್ದು, ಇಲ್ಲಿ ಭಾರತ 188ರನ್ ಕಲೆಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


