ಪಾಕಿಸ್ತಾನ ಟಿ-20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಫಾಫ್ ಡು ಪ್ಲೆಸಿಸ್ ಭವಿಷ್ಯ
ಟಿ-20 ವಿಶ್ವಕಪ್-2021 ಅಂತಿಮ ಹಂತ ತಲುಪಿದೆ. ಇಂದು ನಡೆದ ಮೊದಲ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಗೆದ್ದಿದ್ದು, ನಾಳೆ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಸೆಮಿಫೈನಲ್ ನಡೆಯಲಿದೆ.

ದುಬೈ: ಟಿ-20 ವಿಶ್ವಕಪ್-2021 ಅಂತಿಮ ಹಂತ ತಲುಪಿದೆ. ಇಂದು ನಡೆದ ಮೊದಲ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಗೆದ್ದಿದ್ದು, ನಾಳೆ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಸೆಮಿಫೈನಲ್ ನಡೆಯಲಿದೆ.
ಎರಡನೇ ಸೆಮೀಸ್ ನಲ್ಲಿ ಗೆಲ್ಲುವ ತಂಡ ನ್ಯೂಜಿಲ್ಯಾಂಡ್ ವಿರುದ್ಧ ನವೆಂಬರ್ 14 ರಂದು ಮೆಗಾ ಫೈನಲ್ನಲ್ಲಿ ಮುಖಾಮುಖಿಯಾಗಲಿದೆ. ಆದರೆ, ಸೆಮಿಸ್ ತಲುಪಿರುವ ಪಾಕಿಸ್ತಾನ ಫೈನಲ್ ಪ್ರವೇಶಿಸಿ ಅಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮಲಿದೆಯಾ? ಯಾವ ತಂಡ ಟೈಟಲ್ ಫೇವರಿಟ್ ಆಗಲಿದೆ ಎಂಬುದನ್ನು ಕ್ರಿಕೆಟ್ ತಜ್ಞರು, ಮಾಜಿ, ಸ್ಟಾರ್ ಕ್ರಿಕೆಟಿಗರು ಭವಿಷ್ಯ ನುಡಿದಿದ್ದಾರೆ.
ಈ ಕ್ರಮದಲ್ಲಿ ಟಿ-20 ವಿಶ್ವಕಪ್-2021 ಟ್ರೋಫಿಯನ್ನು ಪಾಕಿಸ್ತಾನ ವಶಪಡಿಸಿಕೊಳ್ಳಲಿದೆ ಎಂದು ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಫಾಫ್ ಡು ಪ್ಲೆಸಿಸ್ ಭವಿಷ್ಯ ನುಡಿದಿದ್ದಾರೆ.
ನ್ಯೂಜಿಲೆಂಡ್ ತಂಡ ಸಹ ಟ್ರೋಫಿ ಗೆಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಈ ಮೆಗಾ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡದ ಪ್ರದರ್ಶನದ ಬಗ್ಗೆ ಡುಪ್ಲೆಸಿಸ್ ಶ್ಲಾಘಿಸಿದ್ದಾರೆ.
ಟಿ-20 ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾದ ಬೌಲಿಂಗ್ ದಾಳಿ ಅತ್ಯುತ್ತಮವಾಗಿದೆ ಎಂದು ಅವರು ಕೊಂಡಾಡಿದ್ದಾರೆ. ಈ ಟೂರ್ನಿಯ ಸೂಪರ್ 12ರಲ್ಲಿ ಆಡಿದ 5 ಪಂದ್ಯಗಳಲ್ಲಿ 4ರಲ್ಲಿ ದಕ್ಷಿಣ ಆಫ್ರಿಕಾ ಗೆದ್ದಿದೆ. ಆದರೂ ಸೆಮಿಸ್ಗೆ ಅರ್ಹತೆ ಪಡೆಯಲು ಸಾಧ್ಯವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


